ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ₹ 5,495 ಕೋಟಿ ತಡೆದಿದ್ದೇ ನಿರ್ಮಲಾ: ಸಿದ್ದರಾಮಯ್ಯ ಟೀಕೆ

Last Updated 3 ಜುಲೈ 2021, 21:34 IST
ಅಕ್ಷರ ಗಾತ್ರ

ಬೆಂಗಳೂರು: ‘ಹದಿನೈದನೇ ಹಣಕಾಸು ಆಯೋಗದ ಶಿಫಾರಸು ಪ್ರಕಾರ ಕರ್ನಾಟಕಕ್ಕೆ ಬರಬೇಕಿದ್ದ ₹ 5,495 ಕೋಟಿಯನ್ನು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ತಡೆ ಹಿಡಿದಿದ್ದಾರೆ ಎಂದು ಆಯೋಗವೇ ನೀಡಿದ ಮಾಹಿತಿ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘ಆಯೋಗ ಶಿಫಾರಸು ಮಾಡಿದ ಅನುದಾನದಲ್ಲಿ ಒಂದೇ ಒಂದು ರೂಪಾಯಿ ಕರ್ನಾಟಕಕ್ಕೆ ಕೊಟ್ಟಿಲ್ಲ. ಕೊಟ್ಟಿದ್ದರೆ ದಾಖಲೆ ತೋರಿಸಲಿ’ ಎಂದು ಸವಾಲು ಹಾಕಿದರು.

‘ನಿರ್ಮಲಾ ಅವರು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ದೇಶದ ಹಣಕಾಸು ಸಚಿವರಾಗಿ ಅವರು ತವರು ರಾಜ್ಯಕ್ಕೇ ಅನುದಾನ ಕೊಡುವುದಿಲ್ಲವೆಂದರೆ, ಕೇಂದ್ರದಲ್ಲಿ ಮಂತ್ರಿಯಾಗಲು ಅವರಿಗೆ ಯೋಗ್ಯತೆ ಇದೆಯೇ’ ಎಂದು ಪ್ರಶ್ನಿಸಿದರು.

‘ಹಣಕಾಸು ಆಯೋಗ ಶಿಫಾರಸು ಮಾಡಿದ ಪ್ರಕಾರ ರಾಜ್ಯಕ್ಕೆ ಹಣ ಕೊಟ್ಟಿದ್ದಾರೆ. ಆ ಹಣ ರಾಜ್ಯ ಸರ್ಕಾರದ ಬೊಕ್ಕಸ ಸೇರಿದ್ದರೆ ಕೋವಿಡ್‌ ಸಂಕಷ್ಟದ ಕಾಲದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಡವರಿಗಾಗಿ ಖರ್ಚು ಮಾಡಬಹುದಿತ್ತು’ ಎಂದರು.

‘ರಾಜ್ಯದಲ್ಲಿ ಯಡಿಯೂರಪ್ಪ ಮತ್ತು ಅವರ ಪುತ್ರ ಲೂಟಿ ಮಾಡುತ್ತಿದ್ದಾರೆಯೇ ಹೊರತು ಬಡವರಿಗೆ ನೆರವಾಗುತ್ತಿಲ್ಲ. ಇನ್ನಾದರೂ ಅವರು ಹಣ ದೋಚುವುದನ್ನು ಬಿಟ್ಟು ಜನರ ಕಡೆಗೆ ನೋಡಲಿ. ಅವರೇ ಶ್ರೀರಾಮುಲು ಆಪ್ತ ಸಹಾಯಕನ ವಿರುದ್ಧ ದೂರು ನೀಡುತ್ತಾರೆ. ಮಂತ್ರಿಗಳು, ಅವರ ಆಪ್ತಸಹಾಯಕರು, ಯಡಿಯೂರಪ್ಪ ಮತ್ತವರ ಮಗ ಎಲ್ಲರೂ ಸೇರಿ ಹಣ ದೋಚುತ್ತಿದ್ದಾರೆ’ ಎಂದು ಆಪಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT