ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ದಸರಾ ಉದ್ಘಾಟನೆಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣಗೆ ಆಹ್ವಾನ

Last Updated 28 ಸೆಪ್ಟೆಂಬರ್ 2021, 13:32 IST
ಅಕ್ಷರ ಗಾತ್ರ

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಆಹ್ವಾನಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಕಚೇರಿ, 'ಅಕ್ಟೋಬರ್ 7ರಿಂದ ಆರಂಭವಾಗಲಿರುವ ನಾಡಹಬ್ಬ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಹಿರಿಯ ಮುತ್ಸದ್ಧಿ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಆಹ್ವಾನ ನೀಡಲು ರಾಜ್ಯಸರ್ಕಾರ ನಿರ್ಧರಿಸಿದೆ. ದಸರಾ ಹಬ್ಬದ ಸಿದ್ಧತೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಯಿತು' ಎಂದು ಹೇಳಿದೆ.

ಕೋವಿಡ್ ಹಿನ್ನೆಲೆಯಲ್ಲಿ ಈ ವರ್ಷವೂ ಸರಳವಾಗಿ ದಸರಾ ಆಚರಿಸಲಾಗುತ್ತಿದ್ದು,ಅ.7 ರಂದು ಬೆಳಿಗ್ಗೆ 8.15 ರಿಂದ 8.45 ರೊಳಗಿನ ಶುಭಮುಹೂರ್ತದಲ್ಲಿ ಚಾಮುಂಡಿಬೆಟ್ಟದಲ್ಲಿ ಉದ್ಘಾಟನೆಗೊಳ್ಳಲಿದೆ. ಅ.15 ರಂದು ವಿಜಯದಶಮಿ ದಿನ ಸಂಜೆ 4.36 ರಿಂದ 4.46ರ ಅವಧಿಯಲ್ಲಿ ನಂದಿಧ್ವಜ ಪೂಜೆ ನಡೆಯಲಿದೆ. 5.00 ರಿಂದ 5.30ರ ಒಳಗೆ ಜಂಬೂ ಸವಾರಿ ನಡೆಯಲಿದ್ದು, ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಿರಲಿದೆ. ಜಂಬೂ ಸವಾರಿಯಲ್ಲಿ ಎಂಟು ಆನೆಗಳು ಪಾಲ್ಗೊಳ್ಳಲಿವೆ. ನವರಾತ್ರಿಯ ಎಲ್ಲಾ ದಿನ ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

‘ಉತ್ಸವದಲ್ಲಿ ಪಾಲ್ಗೊಳ್ಳಲಿರುವ ಗಜಪಡೆಯನ್ನು ಸೆ.16 ರಂದು ಬೆಳಿಗ್ಗೆ 8.36ಕ್ಕೆ ಅರಮನೆಗೆ ಸ್ವಾಗತಿಸಲಾಗುವುದು. ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ಸೆ.13 ರಂದು ಗಜಪಯಣ ಕಾರ್ಯಕ್ರಮ ಸರಳವಾಗಿ ನಡೆಯಲಿದೆ’.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT