ಬೆಂಗಳೂರು: ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕರಾಗಿದ್ದ ಅಂಜನಮೂರ್ತಿ (72) ಅವರು ಗುರುವಾರ ನಿಧನರಾಗಿದ್ದಾರೆ.
ಈ ಕುರಿತು ಕರ್ನಾಟಕ ಕಾಂಗ್ರೆಸ್ ಘಟಕ ಟ್ವೀಟ್ ಮಾಡಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ನಿವಾಸಿಯಾಗಿದ್ದ ಅಂಜನಮೂರ್ತಿ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೃದಯಾಘಾತವಾಗಿದ್ದರಿಂದ ಎರಡು ದಿನಗಳ ಹಿಂದೆ ಅಂಜನಮೂರ್ತಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಮೂರು ಬಾರಿ ಶಾಸಕರಾಗಿದ್ದ ಅಂಜನಮೂರ್ತಿ ವಸತಿ ಸಚಿವರಾಗಿ, ಉಪಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.