ಬುಧವಾರ, ಜುಲೈ 6, 2022
22 °C

ಯೋಗೀಶಗೌಡ ಕೊಲೆ ಪ್ರಕರಣ: ಕಾಂಗ್ರೆಸ್‌ನ ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡ: ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಸಿಬಿಐ ಬಂಧಿಸಿದೆ. 

ಗುರುವಾರ ಬೆಳಿಗ್ಗೆ 7ಕ್ಕೆ ವಿಚಾರಣೆಗಾಗಿ ಸಿಬಿಐ ಅಧಿಕಾರಿಗಳು ಇಲ್ಲಿನ ಉಪನಗರ ಠಾಣೆಗೆ ಅವರನ್ನು ಕರೆಯಿಸಿಕೊಂಡಿದ್ದರು. ನಂತರ ಸುದೀರ್ಘ 9 ಗಂಟೆಗಳ ವಿಚಾರಣೆ ನಂತರ ಸಂಜೆ ಬಂಧಿಸಿದರು. ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಮೊದಲು, ವೈದ್ಯಕೀಯ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ವಿನಯ ಅವರನ್ನು ಅಧಿಕಾರಿಗಳು ಕರೆದೊಯ್ದುರು.

ವಿನಯ ಕುಲಕರ್ಣಿ ಬಂಧನ ಸುದ್ದಿ ಹೊರಬೀಳುತ್ತಿದ್ದಂತೆ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಚಪ್ಪಲಿ ಹಿಡಿದು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಸಿಬಿಐ ವಾಹನದಲ್ಲಿದ್ದ ವಿನಯ ಕುಲಕರ್ಣಿ ಅವರೊಂದಿಗೆ ಮಾತನಾಡಲು ಮುಗಿಬಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು