ಬುಧವಾರ, ಅಕ್ಟೋಬರ್ 28, 2020
20 °C

ನಿವೃತ್ತ ಡಿಜಿ–ಐಜಿಪಿ ಎ.ಪಿ.ದೊರೈ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಪೊಲೀಸ್ ಮಹಾನಿರ್ದೇಶಕರಾಗಿ (ಡಿಜಿ–ಐಜಿಪಿ) ನಿವೃತ್ತರಾಗಿದ್ದ ಎ.ಪಿ. ದೊರೈ (80) ಅವರು ಶುಕ್ರವಾರ ನಿಧನರಾದರು. 

ಅವರಿಗೆ ಪುತ್ರ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.

ತಮಿಳುನಾಡಿನ ದೊರೈ, 1962ನೇ ಐಪಿಎಸ್ ಕರ್ನಾಟಕ ಕೇಡರ್‌ನ ಅಧಿಕಾರಿ. 1994-96ರ ಅವಧಿಯಲ್ಲಿ ಹೈದರಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿ ನಿರ್ದೇಶಕರಾಗಿ ಕೆಲಸ ನಿರ್ವಹಿಸಿದ್ದರು. ನಂತರ, ರಾಜ್ಯಕ್ಕೆ ಬಂದು 1996–97ರ ಅವಧಿಯಲ್ಲಿ ಡಿಜಿ– ಐಜಿಪಿ ಆಗಿ ಕೆಲಸ ಮಾಡಿ ನಿವೃತ್ತರಾಗಿದ್ದರು. ಕೆಂಗೇರಿಯಲ್ಲಿ ಕುಟುಂಬ ಸಮೇತ ವಾಸವಿದ್ದರು.

ತಮ್ಮ ಜೀವನದ ಬಗ್ಗೆ ಆಂಗ್ಲ ಭಾಷೆಯಲ್ಲಿ ‘ಪರ್ಸ್ಯೂಟ್‌ ಆಫ್ ಲಾ ಆ್ಯಂಡ್ ಆರ್ಡರ್’ ಎಂಬ ಕೃತಿಯನ್ನು ಅವರು ಬರೆದಿದ್ದರು.

‘ಕೆಂಗೇರಿಯಲ್ಲಿ ಶುಕ್ರವಾರ ಮಧ್ಯಾಹ್ನ ಅವರ ಅಂತ್ಯಕ್ರಿಯೆ ನಡೆಯಿತು’ ಎಂದು ಕುಟುಂಬದವರು ತಿಳಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.