ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರನ್ನು ಎತ್ತಿ ಕಟ್ಟುವ ಪಿತೂರಿ: ಅಣ್ಣಾಮಲೈ

Last Updated 26 ಡಿಸೆಂಬರ್ 2020, 20:41 IST
ಅಕ್ಷರ ಗಾತ್ರ

ಮೈಸೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆ ಕುರಿತು ಅನಗತ್ಯ ಗೊಂದಲ ಸೃಷ್ಟಿಸಿ, ರೈತರನ್ನು ಎತ್ತಿಕಟ್ಟುವ ಪಿತೂರಿ ನಡೆದಿದೆ ಎಂದು ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಉಪಾಧ್ಯಕ್ಷ, ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ದೂರಿದರು.

ಸಾಮಾಜಿಕ ನ್ಯಾಯ ವೇದಿಕೆ ವತಿಯಿಂದ ಶನಿವಾರ ಇಲ್ಲಿ ಆಯೋಜಿಸಿದ್ದ ‘ಬೆಂಕಿಯ ಚೆಂಡು ಕುಯಿಲಿ’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.

ನೂತನ ಕೃಷಿ ಕಾಯ್ದೆಗಳಲ್ಲಿ ಗೊಂದಲ ಉಂಟು ಮಾಡುವ ಯಾವುದೇ ಅಂಶಗಳು ಇಲ್ಲ. ಎಲ್ಲವೂ ಸ್ಪಷ್ಟತೆಯಿಂದ ಕೂಡಿದೆ. ಆದರೂ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸಲು ದೆಹಲಿಯ ಗಡಿ ಭಾಗದಲ್ಲಿ 7–8 ಲಕ್ಷ ರೈತರನ್ನು ಸೇರಿಸಲಾಗಿದೆ. ಕೇಂದ್ರ ಸರ್ಕಾರ ಮತ್ತು ರೈತರ ನಡುವೆ ಸಂಘರ್ಷ ಉಂಟುಮಾಡುವುದು ಇದರ ಉದ್ದೇಶ ಎಂದು ಕಿಡಿಕಾರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT