ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಂಗ್ರೆಸ್ ಹಿರಿಯ ನಾಯಕ ಕೆ.ಆರ್. ರಮೇಶ್ ಕುಮಾರ್‌ ಪತ್ನಿ ನಿಧನ

Last Updated 17 ಫೆಬ್ರುವರಿ 2023, 10:57 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕದ ವಿಧಾನಸಭೆ ಮಾಜಿ ಸ್ಪೀಕರ್ ಕೆ.ಆರ್‌. ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ (69) ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶುಕ್ರವಾರ ಮಧ್ಯಾಹ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ವಿಜಿಯಮ್ಮ ಅವರನ್ನು ಹೆಚ್ವಿನ ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರು ಪತಿ, ಒಬ್ಬ ಮಗಳು, ಒಬ್ಬ ಮಗ, ಮೊಮ್ಮಕ್ಕಳನ್ನು ಅಗಲಿದ್ದಾರೆ.

ಸಿದ್ದರಾಮಯ್ಯ ಸಂತಾಪ: ‘ಪಕ್ಷದ ಹಿರಿಯ ನಾಯಕರು, ಆತ್ಮೀಯರಾದದ ಕೆ.ಆರ್ ರಮೇಶ್ ಕುಮಾರ್ ಧರ್ಮಪತ್ನಿ ವಿಜಯಮ್ಮ ಅವರು ನಿಧನರಾದ ಸುದ್ದಿ ತಿಳಿದು ಅತೀವ ನೋವಾಯಿತು. ರಮೇಶ್ ಕುಮಾರ್ ಅವರ ಕುಟುಂಬದ ಶೋಕದಲ್ಲಿ ನಾನೂ ಭಾಗಿ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT