ಕಲಬುರ್ಗಿ: ಮಾಜಿ ಸಚಿವ ಕೆ.ಬಿ. ಶಾಣಪ್ಪ (83) ಅವರು ಕೋವಿಡ್‌ನಿಂದ ಇಲ್ಲಿನ ಜಿಮ್ಸ್ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು.

ನಾಲ್ಕು ದಿನಗಳ ಹಿಂದೆ ಕೋವಿಡ್ ದೃಢಪಟ್ಟಿದ್ದರಿಂದ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಪತ್ನಿ, ಇಬ್ಬರು ಪುತ್ರರು ಮತ್ತು ಮೂವರು ಪುತ್ರಿಯರು ಇದ್ದಾರೆ. ಸೋಮವಾರ (ಮೇ 10) ಬೆಳಿಗ್ಗೆ 10ಕ್ಕೆ ಸ್ವಗ್ರಾಮ ರಾವೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಚಿತ್ತಾಪುರ ತಾಲ್ಲೂಕಿನ ರಾವೂರ ಗ್ರಾಮದ ಶಾಣಪ್ಪ ಅವರು ಕಲಬುರ್ಗಿ ಭಾಗದ ಪ್ರಭಾವಿ ನಾಯಕರಾಗಿದ್ದರು.

ಶಹಾಬಾದ್ ಸಿಮೆಂಟ್ ಕಾರ್ಖಾನೆಯ ಕಾರ್ಮಿಕ ಮುಖಂಡರಾಗಿದ್ದ ಅವರು, ಶಹಾಬಾದ್ ವಿಧಾನಸಭಾ ಕ್ಷೇತ್ರಕ್ಕೆ ಭಾರತ ಕಮ್ಯುನಿಸ್ಟ್ ಪಕ್ಷದಿಂದ (ಸಿಪಿಐ) ಎರಡು ಬಾರಿ ಶಾಸಕರಾಗಿದ್ದರು.

ಜೆ.ಎಚ್.ಪಟೇಲ್ ಅವರ ಸಂಪುಟದಲ್ಲಿ ಅಬಕಾರಿ ಸಚಿವರಾಗಿದ್ದ ಅವರು 1996ರಲ್ಲಿ ವಿಧಾನ ಪರಿಷತ್ತಿಗೆ ನಾಮನಿರ್ದೇಶನಗೊಂಡಿದ್ದರು. ನಂತರ ಬಿಜೆಪಿಗೆ ಸೇರಿದ ಅವರು 2006ರಲ್ಲಿ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಸಂಸದರಾಗಿ ಆಯ್ಕೆಯಾದರು. 2012ರಲ್ಲಿ ಮತ್ತೆ ವಿಧಾನ ಪರಿಷತ್ತಿಗೆ ನಾಮನಿರ್ದೇಶನಗೊಂಡಿದ್ದರು. 2019ರಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.