ಶುಕ್ರವಾರ, ಜುಲೈ 30, 2021
28 °C

ಮಾಜಿ ಶಾಸಕ ಎಚ್‌.ಡಿ. ಬಸವರಾಜು ಆಮ್‌ ಆದ್ಮಿ ಪಕ್ಷಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ವಿರಾಜಪೇಟೆಯ ಮಾಜಿ ಶಾಸಕ ಎಚ್‌.ಡಿ. ಬಸವರಾಜು ಶುಕ್ರವಾರ ಬಿಜೆಪಿ ತೊರೆದು ಆಮ್‌ ಆದ್ಮಿ ಪಕ್ಷವನ್ನು ಸೇರಿದರು.

ಬೆಂಗಳೂರು ಪ್ರೆಸ್‌ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲೇ ಆಮ್‌ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಪಕ್ಷದ ಧ್ವಜ ನೀಡುವ ಮೂಲಕ ಬಸವರಾಜು ಅವರನ್ನು ಬರಮಾಡಿಕೊಂಡರು. ಆಮ್‌ ಆದ್ಮಿ ಪಕ್ಷದ ರಾಜ್ಯ ಘಟಕದ ಹಲವು ಮುಖಂಡರು ಉಪಸ್ಥಿತರಿದ್ದರು.

ಬಸವರಾಜು 1994 ಮತ್ತು 2004ರಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. ಇತ್ತೀಚೆಗೆ ದೆಹಲಿಗೆ ತೆರಳಿ ಆಮ್‌ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರೊಂದಿಗೆ ಮಾತುಕತೆ ನಡೆಸಿದ್ದರು.

ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಅವರು, ‘ಎರಡೂ ಕಡೆಗಳಲ್ಲಿ ನಮ್ಮದೇ ಬಿಜೆಪಿ ಸರ್ಕಾರ ಇದೆ. ರಾಜ್ಯದಲ್ಲಿ, ಕೇಂದ್ರದಲ್ಲಿ ಎರಡೂ ಕಡೆಗಳಲ್ಲಿ ಆಡಳಿತವಿದ್ದರೂ, ಜನಪರ ಕೆಲಸ ಮಾಡುತ್ತಿಲ್ಲ. ಭ್ರಷ್ಟಾಚಾರ ಹೆಚ್ಚಾಗಿದ್ದು, ರೋಸಿ ಹೋಗಿದ್ದೇನೆ. ಜನಪರವಾದ ಕೆಲಸ ಮಾಡಬಲ್ಲ ಭರವಸೆಯನ್ನು ಆಮ್‌ ಆದ್ಮಿ ಪಕ್ಷದಲ್ಲಿ ಕಂಡಿದ್ದೇನೆ. ಈ ಕಾರಣದಿಂದ ಬಿಜೆಪಿ ತೊರೆದು ಆಮ್‌ ಆದ್ಮಿ ಪಕ್ಷ ಸೇರಿದ್ದೇನೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು