ಬೆಂಗಳೂರು: ರೈತರು ಆಯೋಜಿಸಿರುವ ರ‍್ಯಾಲಿಗಳಲ್ಲಿ ಸಾಂಕ್ರಮಿಕ ರೋಗಗಳ ನಿಯಂತ್ರಣ ಕಾಯ್ದೆಯ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

‘ಮಂಗಳವಾರ ನಗರದಲ್ಲಿ ರೈತರ ರ‍್ಯಾಲಿ ಆಯೋಜನೆಗೊಂಡಿದೆ. ವಿವಿಧ ಜಿಲ್ಲೆಗಳಿಂದ ನಗರಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ರೈತರು ಬರುವ ಸಾಧ್ಯತೆ ಇದೆ. ಭಾನುವಾರ ನಗರದಲ್ಲಿ 400ಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗಿವೆ. ರ‍್ಯಾಲಿ ಸಂದರ್ಭದಲ್ಲಿ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಅತ್ಯಗತ್ಯ’ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ತಿಳಿಸಿತು.

‘2020 ಡಿಸೆಂಬರ್ 5ರಂದು ಕನ್ನಡ ಚಳವಳಿ ವಾಟಾಳ್ ಪಕ್ಷ ಕರೆ ನೀಡಿದ್ದ ಬಂದ್ ಸಂದರ್ಭದಲ್ಲಿ ನಿಬಂಧನೆ ಉಲ್ಲಂಘಿಸಿರುವ ಆರೋಪದಲ್ಲಿ ಆ ಪಕ್ಷದ ನಾಯಕ ವಾಟಾಳ್ ನಾಗರಾಜ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ₹50 ಸಾವಿರ ದಂಡ ಪಾವತಿಸಲು ವಿಫಲವಾದ ಬಳಿಕ ಮೊಕದ್ದಮೆ ದಾಖಲಿಸಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ವಿವರಣೆ ಸಲ್ಲಿಸಿದ್ದಾರೆ.

‘ಇದೇ 28ರಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆ ತಿದ್ದುಪಡಿ ಮಸೂದೆಯ ಮಂಡಿಸಲು ಸಿದ್ಧತೆ ನಡೆಸಲಾಗಿದೆ’ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.