ಭಾನುವಾರ, ಫೆಬ್ರವರಿ 28, 2021
20 °C

ಕೇಂದ್ರೀಯ ರಸ್ತೆ ನಿಧಿ ಕಾಮಗಾರಿಗೆ ಸಾಲ ಪಡೆಯಲಿದ್ದೇವೆ: ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೇಂದ್ರೀಯ ರಸ್ತೆ ನಿಧಿ (ಸಿಆರ್‌ಎಫ್) ಕಾಮಗಾರಿಗಳಿಗಾಗಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆದು, ವಿನಿಯೋಗ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಶುಕ್ರವಾರ ನಡೆದ ಹುಬ್ಬಳ್ಳಿ ಮತ್ತು ಕಲಘಟಗಿ ರಾಷ್ಷ್ರೀಯ ಹೆದ್ದಾರಿ ಕಾಮಗಾರಿಗಳ ಭೂಮಿ ಪೂಜೆ ಸಮಾರಂಭದಲ್ಲಿ ವರ್ಚ್ಯುಯಲ್ ಮೂಲಕ ಭಾಗವಹಿಸಿ ಮಾತನಾಡಿದ ಅವರು ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರಿಗೆ ಈ ಮಾಹಿತಿ ನೀಡಿದರು.

ಹೆದ್ದಾರಿ ಜಾಲ‌ ವಿಸ್ತರಣೆಗೆ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು. ಪರಿಸರ ಸಂಬಂಧಿ ಅನುಮತಿಗಳನ್ನೂ ತ್ವರಿತವಾಗಿ ನೀಡಲಾಗುವುದು ಎಂದರು.

ನಾಲ್ಕನೇ ಹಂತದ ರಾಷ್ಟ್ರೀಯ ಹೆದ್ದಾರಿ ವಿಸ್ತರಣಾ ಕಾಮಗಾರಿಗಳ ಭೂಸ್ವಾಧೀನ ಪ್ರಕ್ರಿಯೆಗೆ ಅಗತ್ಯವಿರುವ ಅನುದಾನವನ್ನು ತ್ವರಿತವಾಗಿ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಕೇಂದ್ರ ಸಚಿವರಿಗೆ ಮನವಿ ಮಾಡಿದರು

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು