ಹುಬ್ಬಳ್ಳಿ: ನಗರದಲ್ಲಿ 17 ವರ್ಷದ ಬಾಲಕಿ ಮೇಲೆ ನಾಲ್ವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬುಧವಾರ ನಡೆದಿದೆ. ಪ್ರಕರಣದಲ್ಲಿ ಭಾಗಿಯಾದ ಎಲ್ಲ ಆರೋಪಿಗಳನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಈ ಬಗ್ಗೆ ಬಾಲಕಿ ದೂರು ನೀಡಿದ್ದು, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
‘ಬಾಲಕಿಗೆ ಸ್ನೇಹಿತನ ಮೂಲಕ ಆರೋಪಿ ಪರಿಚಯವಾಗಿದ್ದ. ಮೊಬೈಲ್ ಕೊಡಿಸುವುದಾಗಿ ಬಾಲಕಿಯನ್ನು ಮೈದಾನವೊಂದರ ಬಳಿ ಕರೆಸಿಕೊಂಡಿದ್ದ. ಸ್ನೇಹಿತನ ಜೊತೆಗೂಡಿ ಬಾಲಕಿಯನ್ನು ಹೋಟೆಲೊಂದಕ್ಕೆ ಕರೆದುಕೊಂಡು ಹೋಗಿ ಊಟ ಮಾಡಿದರು. ಬಳಿಕ ಇಬ್ಬರೂ ಬಾಲಕಿಯನ್ನು ಹೊರವಲಯಕ್ಕೆ ಕರೆದೊಯ್ದು ಬೆದರಿಸಿ, ಅತ್ಯಾಚಾರ ಎಸಗಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.
‘ಬಳಿಕ ಆರೋಪಿಗಳು ಇನ್ನಿಬ್ಬರು ಸ್ನೇಹಿತರನ್ನು ಅಲ್ಲಿಗೆ ಕರೆಸಿಕೊಂಡಿದ್ದು, ಅವರೂ ಅತ್ಯಾಚಾರ ನಡೆಸಿದ್ದಾರೆ. ಎಲ್ಲ ಆರೋಪಿಗಳು 22ರಿಂದ 26 ವರ್ಷದೊಳಗಿನವರು. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.