ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರಿನ ಸಾಮೂಹಿಕ ಅತ್ಯಾಚಾರ ಪ್ರಕರಣ: ತಮಿಳುನಾಡಲ್ಲಿ ನಾಲ್ವರು ಆರೋಪಿಗಳು ವಶಕ್ಕೆ

Last Updated 28 ಆಗಸ್ಟ್ 2021, 4:55 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ಚಾಮುಂಡಿಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಗುಡ್ಡದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ತಮಿಳು ನಾಡಿನಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಘಟನಾ ಸ್ಥಳದಲ್ಲಿ ದೊರೆತ ಮೊಬೈಲ್ ಸಿಗ್ನಲ್ ಆಧಾರದ ಮೇಲೆ ಸುಮಾರು 10 ಮಂದಿಯ ಮೇಲೆ ಶಂಕೆ ಉಂಟಾಗಿದೆ. ಇವರಲ್ಲಿ ಕೆಲವರು ಕೇರಳ ಮತ್ತು ತಮಿಳುನಾಡಿಗೆ ಹೋಗಿದ್ದಾರೆ. ಹಾಗಾಗಿ ಪೊಲೀಸರ ತಂಡಗಳು ತಮಿಳುನಾಡು ಮತ್ತು ಕೇರಳಕ್ಕೆ ಶುಕ್ರವಾರ ತೆರಳಿದ್ದವು. ಶುಕ್ರವಾರ ತಡರಾತ್ರಿಯ ಹೊತ್ತಿಗೆ ನಾಲ್ವರನ್ನು ತಮಿಳುನಾಡಿನಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ‌.

ಇವರು ಘಟನೆ ನಡೆದ ಸಂದರ್ಭದಲ್ಲಿ ಸ್ಥಳಕ್ಕೆ ಹೋಗಿದ್ದು ಏಕೆ, ನಂತರ ರಾಜ್ಯ ಬಿಟ್ಟು ಹೋಗಿದ್ದು ಏಕೆ ಎಂಬ ಕುರಿತು ತನಿಖೆ ನಡೆಸಲಾಗುತ್ತಿದೆ. ಆದರೆ ಈವರೆಗೂ ಇವರೆ ಆರೋಪಿಗಳು ಎಂದು ಖಚಿತಪಟ್ಟಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ಪ್ರಜಾವಾಣಿ ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT