ಯಾದಗಿರಿ:‘ಶಹಾಪುರ ಬಸ್ ನಿಲ್ದಾಣದಿಂದ ತನ್ನನ್ನು ಬಲವಂತವಾಗಿ ಹೊರವಲಯಕ್ಕೆ ಕರೆದುಕೊಂಡು ಹೋಗಿ ನಗ್ನಗೊಳಿಸಿ ನಾಲ್ವರು ಹಲ್ಲೆ ಮಾಡಿದ್ದಾರೆ. ಅವರಲ್ಲಿ ಇಬ್ಬರು ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ. ಒಂದೂವರೆ ವರ್ಷದ ಹಿಂದೆ ಈ ಘಟನೆ ನಡೆದಿದೆ ಎಂದುಸಂತ್ರಸ್ತ ಮಹಿಳೆ ಹೇಳಿದ್ದಾಳೆ’ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಆರ್. ಪ್ರಮೀಳಾ ನಾಯ್ಡು ತಿಳಿಸಿದರು.
ಸಂತ್ರಸ್ತ ಮಹಿಳೆಯನ್ನು ಬುಧವಾರ ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸರ್ಕಾರದಿಂದ ₹3 ಲಕ್ಷ ಸಾಲ ಕೊಡಿಸಿ ಜೀವನ ನಿರ್ವಹಣೆಗೆ ಆ ಮಹಿಳೆಗೆ ಅನುಕೂಲ ಮಾಡಿಕೊಡಲಾಗುವುದು’ ಎಂದರು.
‘ಜಿಲ್ಲಾಧಿಕಾರಿ ಅವರು ಸಂತ್ರಸ್ತೆಗೆ ಸಹಾಯಧನ ನೀಡಿದ್ದಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಎಸ್‌ಪಿ ಅವರಿಗೆ ತಿಳಿಸಿದ್ದೇನೆ’ ಎಂದು ಹೇಳಿದರು.
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ವಿಡಿಯೊ ಇತ್ತೀಚಿಗಷ್ಟೇ ವೈರಲ್ ಆಗಿತ್ತು. ಪೊಲೀಸರು ಸಂತ್ರಸ್ತೆಯನ್ನು ಪತ್ತೆಹಚ್ಚಿ, ನಾಲ್ವರು ಆರೋ
ಪಿಗಳನ್ನು ಈಗಾಗಲೇ ಬಂಧಿಸಿದ್ದಾರೆ.
416 ಸ್ವಯಂ ಪ್ರೇರಿತ ದೂರು ದಾಖಲು:
‘ರಾಜ್ಯದಲ್ಲಿ ಮಾರ್ಚ್‌ನಿಂದ ಸೆಪ್ಟೆಂಬರ್ ವರೆಗೆ ಮಹಿಳಾ ದೌರ್ಜನ್ಯಕ್ಕೆ ಸಂಬಂಧಿಸಿದ416 ಸ್ವಯಂ ಪ್ರೇರಿತ ಪ್ರಕರಣಗಳನ್ನು ರಾಜ್ಯಮಹಿಳಾ ಅಯೋಗ ದಾಖಲಿಸಿಕೊಂಡಿದೆ. ಒಂದು ವರ್ಷದಲ್ಲಿ 1,600 ಪ್ರಕರಣ ಇತ್ಯರ್ಥ ಪಡಿಸಲಾಗಿದೆ’ ಎಂದುಆರ್. ಪ್ರಮೀಳಾ ನಾಯ್ಡು ತಿಳಿಸಿದರು.
‘ದೌರ್ಜನ್ಯ, ಪ್ರೇಮ ಪ್ರಕರಣಗಳು ಸೇರಿವೆ. ಬೆಂಗಳೂರಿನ ಕೆಲಸದ ಸ್ಥಳದಲ್ಲಿ ಮಹಿಳೆ ಮೇಲೆ ಕಿರುಕುಳ ಪ್ರಕರಣಗಳು ಹೆಚ್ಚುತ್ತಿವೆ’ ಎಂದು ಕಳವಳ ವ್ಯಕ್ತಪಡಿಸಿದ ಅವರು, ‘ಮಹಿಳೆಯರು ತಮ್ಮ ಸ್ವಾಭಿಮಾನಕ್ಕೆ ಧಕ್ಕೆ ಬಂದರೆ ಮಹಿಳಾ ಆಯೋಗವನ್ನು ತಕ್ಷಣವೇ ಸಂಪರ್ಕಿಸಬೇಕು’ ಎಂದು ಕೋರಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.