ಚಂಡಮಾರುತ ಪರಿಣಾಮ: ಬೆಂಗಳೂರಿನಲ್ಲಿ ಮಳೆ ಸಾಧ್ಯತೆ

ಚೆನ್ನೈ: ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲೂ ಮಳೆಯಾಗುವ ಸಾಧ್ಯತೆಯಿದ್ದು, ಮೋಡ ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿರುವ ಮಾಂಡೌಸ್ ಚಂಡಮಾರುತ ಇಂದು ಮಧ್ಯರಾತ್ರಿಯಿಂದ ತಮಿಳುನಾಡಿನ ಉತ್ತರ, ಪುದುಚೇರಿ ಮತ್ತು ಆಂಧ್ರಪ್ರದೇಶದ ಶ್ರೀಹರಿಕೋಟಾದ ತೀರ ಪ್ರದೇಶಗಳನ್ನು ಹಾದುಹೋಗಲಿದೆ.
ಇದನ್ನೂ ಓದಿ: Cyclone Mandous: ತಮಿಳುನಾಡಿನ 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಶಾಲೆಗಳಿಗೆ ರಜೆ
ಚಂಡಮಾರುತದ ಪರಿಣಾಮ ಡಿಸೆಂಬರ್ 12ರವರೆಗೆ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಅಧಿಕಾರಿಗಳು ತಿಳಿಸಿದ್ದಾರೆ.
ಡಿಸೆಂಬರ್ 11 ಹಾಗೂ 12ರಂದು ಕರ್ನಾಟಕ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು, ಮಿಂಚಿನ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಜಿಲ್ಲೆಗಳಲ್ಲಿ, ಚಿಕ್ಕಮಗಳೂರು, ಕೋಲಾರ, ಮೈಸೂರು, ತುಮಕೂರು ಮತ್ತು ಉತ್ತರ ಕರ್ನಾಟಕದ ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.