ಭಾನುವಾರ, ಜೂನ್ 20, 2021
20 °C

ಕಿರಿಮಂಜೇಶ್ವರ ಸಮೀಪ ದೋಣಿ ಪಲ್ಟಿ: ನಾಲ್ವರು ಮೀನುಗಾರರು ನಾಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೈಂದೂರು (ಉಡುಪಿ): ಕಿರಿಮಂಜೇಶ್ವರ ಸಮೀಪದ ಕೊಡೇರಿಯಿಂದ ಭಾನುವಾರ ಮೀನುಗಾರಿಕೆಗೆ ತೆರಳಿದ್ದ ದೋಣಿ ಅಲೆಗಳ ಅಬ್ಬರಕ್ಕೆ ಸಿಲುಕಿ ಮಗುಚಿದ್ದು, ದೋಣಿಯಲ್ಲಿದ್ದ ನಾಲ್ವರು ಮೀನುಗಾರರು ನಾಪತ್ತೆಯಾಗಿದ್ದಾರೆ.

ಮಂಜುನಾಥ್ ಕಾರ್ವಿ, ಲಕ್ಷ್ಮಣ ಖಾರ್ವಿ, ಶೇಖರ್ ಖಾರ್ವಿ ಹಾಗೂ ನಾಗರಾಜ ಖಾರ್ವಿ ಕಣ್ಮರೆಯಾದವರು. ಕರಾವಳಿ ಕಾವಲು ಪಡೆಯ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು ನಾಪತ್ತೆಯಾದವ ಪತ್ತೆಗೆ ಶೋಧ ನಡೆಸುತ್ತಿದ್ದಾರೆ.

ಕರಾವಳಿಯಲ್ಲಿ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಕಡಲು ಪ್ರಕ್ಷುಬ್ಧಗೊಂಡು ಅಲೆಗಳ ಉಬ್ಬರ ಹೆಚ್ಚಾಗಿದೆ. ಇದನ್ನು ಲೆಕ್ಕಿಸದೆ ಸಾಗರ್ ಶ್ರೀ ಹೆಸರಿನ ದೋಣಿಯಲ್ಲಿ 11 ಮೀನುಗಾರರು ಸಮುದ್ರಕ್ಕಿಳಿದಿದ್ದರು. ಈ ಸಂದರ್ಭ ದೋಣಿ ಪಲ್ಪಿಯಾಗಿದ್ದು, 7 ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು