ಸೋಮವಾರ, ಡಿಸೆಂಬರ್ 5, 2022
22 °C

ನಾಲ್ವರು ಐಪಿಎಸ್‌ ಅಧಿಕಾರಿಗಳ ವರ್ಗಾವಣೆ: ಮಿಥುನ್‌ ಕುಮಾರ್ ಶಿವಮೊಗ್ಗ ಎಸ್‌ಪಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಾಲ್ವರು ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸೋಮವಾರ ಆದೇಶ ಹೊರಡಿಸಿದ್ದು, ಸಿಐಡಿ ಎಸ್‌ಪಿ ಹುದ್ದೆಯಲ್ಲಿದ್ದ 2016ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿ ಜಿ.ಕೆ. ಮಿಥುನ್‌ ಕುಮಾರ್‌ ಅವರನ್ನು ಶಿವಮೊಗ್ಗ ಎಸ್‌ಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಶಿವಮೊಗ್ಗ ಎಸ್‌ಪಿಯಾಗಿದ್ದ ಬಿ.ಎಂ. ಲಕ್ಷ್ಮೀಪ್ರಸಾದ್‌ ಅವರನ್ನು ವರ್ಗಾವಣೆ ಮಾಡಿದ್ದು, ಯಾವುದೇ ಹುದ್ದೆ ತೋರಿಸಿಲ್ಲ.

ಬಳ್ಳಾರಿ ಎಸ್‌ಪಿಯಾಗಿದ್ದ ಸೈದುಲ್‌ ಅಡಾವತ್‌ ಅವರನ್ನು ಆಂತರಿಕ ಭದ್ರತಾ ವಿಭಾಗದ ಭಯೋತ್ಪಾದನೆ ನಿಗ್ರಹ ಘಟಕದ ಎಸ್‌ಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಭಯೋತ್ಪಾದನೆ ನಿಗ್ರಹ ಘಟಕದ ಎಸ್‌ಪಿ ಹುದ್ದೆಯಲ್ಲಿದ್ದ ರಂಜಿತ್‌ ಕುಮಾರ್‌ ಬಂಡಾರು ಅವರನ್ನು ಬಳ್ಳಾರಿ ಎಸ್‌ಪಿಯನ್ನಾಗಿ ವರ್ಗಾಯಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು