ಸೋಮವಾರ, ಆಗಸ್ಟ್ 8, 2022
23 °C

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರಿನಲ್ಲಿ ವಂಚನೆ: ಎಫ್‌ಐಆರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೇಂದ್ರ ಕೃಷಿ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೆಸರಿನಲ್ಲಿ ವ್ಯಕ್ತಿಯೊಬ್ಬ ಜನರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ್ದು, ಈ ಸಂಬಂಧ ಸಂಜಯನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

‘ಸಚಿವರ ಆಪ್ತ ಸಹಾಯಕ ವರುಣ್ ಆದಿತ್ಯ ಅವರು ವಂಚನೆ ಬಗ್ಗೆ ದೂರು ನೀಡಿದ್ದಾರೆ. ಆರೋಪಿ ಎನ್ನಲಾದ ಪ್ರಕಾಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಶೋಭಾ ಕರಂದ್ಲಾಜೆ ಅವರ ಆಪ್ತನೆಂದು ಹೇಳಿಕೊಂಡು ರಾಜ್ಯ ಹಾಗೂ ಹೊರ ರಾಜ್ಯಗಳ ಹಲವು ಜಮೀನ್ದಾರರಿಗೆ ಕರೆ ಮಾಡಿದ್ದ ಆರೋಪಿ, ನಾನಾ ಆಮಿಷವೊಡ್ಡಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾನೆ. ಈ ಬಗ್ಗೆ ಜಮೀನ್ದಾರರೊಬ್ಬರು ಸಚಿವರಿಗೆ ಮಾಹಿತಿ ನೀಡಿರುವುದಾಗಿ ಗೊತ್ತಾಗಿದೆ. ವಂಚನೆಗೆ ಬಳಸಿದ್ದ ಮೊಬೈಲ್ ಸಂಖ್ಯೆ ಆಧರಿಸಿ ಆರೋಪಿ ಪತ್ತೆ ಮಾಡಲಾಗುತ್ತಿದೆ’ ಎಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು