ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇದೇ 21 ರಿಂದ ಹಿಂಗಾರು ಪ್ರವೇಶ ಸಾಧ್ಯತೆ

Last Updated 18 ಅಕ್ಟೋಬರ್ 2021, 17:30 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ ನೈರುತ್ಯ ಮುಂಗಾರಿನ ಅಬ್ಬರ ಕಡಿಮೆಯಾಗಿದ್ದು, ಅ.21 ರಿಂದ ರಾಜ್ಯಕ್ಕೆ ಹಿಂಗಾರು ಪ್ರವೇಶಿಸುವ ಸಾಧ್ಯತೆಗಳಿವೆ’ ಎಂದು ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ಉಸ್ತುವಾರಿ ನಿರ್ದೇಶಕಿ ಗೀತಾ ಅಗ್ನಿಹೋತ್ರಿ ತಿಳಿಸಿದರು.

‘ಮುಂಗಾರು ಚುರುಕುಗೊಂಡಿದ್ದರಿಂದ ರಾಜ್ಯದಲ್ಲಿ ಒಂದು ವಾರದಿಂದ ಬಿಡದೇ ಮಳೆ ಬಂದಿತ್ತು. ಸದ್ಯ ಮುಂದಿನ ಎರಡು ದಿನಗಳವರೆಗೆ ರಾಜ್ಯದಲ್ಲಿ ಮಳೆಯಾಗುವ ಸಂಭವ ಕಡಿಮೆ. ಅ.21 ರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮತ್ತೆ ಮಳೆ ಪ್ರಮಾಣ ಹೆಚ್ಚಲಿದ್ದು, ಹಿಂಗಾರು ಮಳೆ ಪ್ರವೇಶದ ಲಕ್ಷಣಗಳು ಕಂಡುಬಂದಿವೆ’ ಎಂದರು.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್‌’ ಘೋಷಿಸಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.

ಮಳೆ–ಎಲ್ಲಿ, ಎಷ್ಟು?: ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಸೋಮವಾರ 5 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಕಾರ್ಕಳ, ಅಂಕೋಲಾ, ಚಿಕ್ಕಮಗಳೂರು, ಹರಪನಹಳ್ಳಿ, ತಿಪಟೂರು, ಕುಣಿಗಲ್‌ನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT