ಮಂಗಳವಾರ, ಅಕ್ಟೋಬರ್ 26, 2021
23 °C

ತೈಲ ಬೆಲೆ ಬುಲೆಟ್ ರೈಲಿನಂತೆ ಮುನ್ನುಗ್ಗುತ್ತಿದೆ, ಇದೇನಾ ಅಚ್ಛೆ ದಿನ್: ಕಾಂಗ್ರೆಸ್

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಇಂಧನ ಬೆಲೆ ಪ್ರಧಾನಿ ಮೋದಿಯವರ ಬುಲೆಟ್ ರೈಲಿನಂತೆಯೇ ಮುನ್ನುಗ್ಗುತ್ತಿದೆ. ಇದೇನಾ ಮೋದಿಯವರ ಅಚ್ಛೆ ದಿನ್‌’ ಎಂದು ಕಾಂಗ್ರೆಸ್‌ ವ್ಯಂಗ್ಯವಾಡಿದೆ.

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಪ್ರಶ್ನಿಸಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ‘ಡೀಸೆಲ್ ಬೆಲೆ ಐತಿಹಾಸಿಕವಾಗಿ ಸೆಂಚುರಿ ಭಾರಿಸಿದೆ. ಪೆಟ್ರೋಲ್ ಬೆಲೆ ಡಬಲ್ ಸೆಂಚುರಿಯತ್ತ ಸಾಗಿದೆ. ಅಡುಗೆ ಸಿಲಿಂಡರ್ ಹೊತ್ತಿ ಉರಿಯುತ್ತಿದೆ. ಪ್ರಧಾನಿ ಮೋದಿಯವರ ಅಚ್ಛೆ ದಿನ್ ಅಂದರೆ ಇದೇನಾ?’ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.

‘ಬಿಜೆಪಿ ಆಡಳಿತದಲ್ಲಿ ದಲಿತರ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಗಣನೀಯವಾಗಿ ಹೆಚ್ಚಿವೆ. ಮೈಸೂರು ಅತ್ಯಾಚಾರದ ಘಟನೆಯ ನಂತರವೂ ಸರ್ಕಾರ ಕಾನೂನು ಸುವ್ಯವಸ್ಥೆಯನ್ನು ಗಟ್ಟಿಗೊಳಿಸದೆ ನಿರ್ಲಕ್ಷ್ಯವಹಿಸಿದೆ. ರಕ್ಷಣೆಯ ವಿಷಯದಲ್ಲಿ ಗಂಭೀರ ಪ್ರಯತ್ನಗಳನ್ನೇ ಮಾಡದಿರುವುದು ಗೃಹಸಚಿವರ ಅಸಾಮರ್ಥ್ಯಕ್ಕೆ ಹಿಡಿದ ಕನ್ನಡಿ’ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು