ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಲೆ ಏರಿಕೆ: ತಟ್ಟೆ ಬಾರಿಸಿ ‘ಕೈ’ ಪ್ರತಿಭಟನೆ

Last Updated 31 ಮಾರ್ಚ್ 2022, 18:44 IST
ಅಕ್ಷರ ಗಾತ್ರ

ಬೆಂಗಳೂರು: ಪೆಟ್ರೋಲ್, ಡೀಸೆಲ್‌, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ದೇಶದಾದ್ಯಂತ ಕಾಂಗ್ರೆಸ್‌ ಗುರುವಾರ ಹಮ್ಮಿಕೊಂಡಿದ್ದ ‘ಬೆಲೆ ಏರಿಕೆ ಮುಕ್ತ ಭಾರತ’ ಅಭಿಯಾನ ಅಂಗವಾಗಿ ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ದ್ವಿಚಕ್ರ ವಾಹನ ಮತ್ತು ಅಡುಗೆ ಅನಿಲ ಸಿಲಿಂಡರ್‌ಗೆ ಹೂವಿನ ಹಾರ ಹಾಕಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಂಗಳಾರತಿ ಮಾಡಿದರೆ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜಾಗಟೆ ಬಾರಿಸಿದರು. ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್‌, ‘ಕಳೆದ 11 ದಿನ ಗಳಲ್ಲಿ ಕೇಂದ್ರ ಸರ್ಕಾರ 10 ಬಾರಿ ಇಂಧನ ಬೆಲೆ ಏರಿಸಿದೆ. ಜನರ ಜೇಬು ದಿನನಿತ್ಯ ಪಿಕ್ ಪಾಕೆಟ್
ಆಗುತ್ತಿದೆ. ಎಲ್ಲರ ಆದಾಯ ದ್ವಿಗುಣಗೊಳಿಸುತ್ತೇವೆ ಎಂದಿದ್ದ ಬಿಜೆಪಿ ಸರ್ಕಾರದ ಅವಧಿ ಯಲ್ಲಿ ಬೆಲೆ ಏರಿಕೆ ಗಗನಕ್ಕೇರಿದೆ. ಆದಾಯ ಪಾತಾಳಕ್ಕೆ ಹೋಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಗೃಹಿಣಿಯರು, ವಾಹನ ಸವಾರರು ಹೀಗೆ ಎಲ್ಲರೂ ದಿನನಿತ್ಯ ನೋವು ಅನುಭವಿಸುತ್ತಿದ್ದಾರೆ. ರಾಜ್ಯದ ಜನ ಅವಕಾಶಕ್ಕಾಗಿ ಕಾದು ಕುಳಿತಿದ್ದಾರೆ. ಅವಕಾಶ ಸಿಕ್ಕಾಗ ಕಾಂಗ್ರೆಸ್‌ಗೆ ಮತ ಹಾಕಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವ ಮೂಲಕ ನೋವು ಹೊರಹಾಕುತ್ತಾರೆಂಬ ನಂಬಿಕೆ ನಮ ಗಿದೆ. ಜನರ ಧ್ವನಿಯಾಗಿ ನಾವು ಕೆಲಸ ಮಾಡುತ್ತಿದ್ದೇವೆ’ ಎಂದು ಹೇಳಿದರು.

ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ರಾಮಲಿಂಗಾರೆಡ್ಡಿ, ಧ್ರುವನಾರಾಯಣ ಇದ್ದರು.

ಅದಕ್ಕೂ ಮೊದಲು ಸದಾಶಿವನಗರದಲ್ಲಿರುವ ತಮ್ಮ ನಿವಾ ಸದ ಬಳಿ ಅಡುಗೆ ಅನಿಲದ ಸಿಲಿಂಡರ್‌ಗೆ ಹೂವಿನ ಹಾರ ಹಾಕಿ, ಚಪ್ಪಾಳೆ ತಟ್ಟಿ ಡಿ.ಕೆ. ಶಿವಕುಮಾರ್‌ ಪ್ರತಿಭಟನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT