ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರಕಾರ್ಮಿಕರ ಬೇಡಿಕೆ ಈಡೇರಿಸಲು ಸಿದ್ದರಾಮಯ್ಯ ಆಗ್ರಹ

ಅಕ್ಷರ ಗಾತ್ರ

ಬೆಂಗಳೂರು: ಮುಷ್ಕರ ನಿರತ ಪೌರಕಾರ್ಮಿಕರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಿ, ಶೀಘ್ರವಾಗಿ ಈಡೇರಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸುವುದಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಶನಿವಾರ ಟ್ವೀಟ್‌ ಮಾಡಿರುವ ಅವರು, ‘ನಾನು ಮುಖ್ಯಮಂತ್ರಿಯಾಗಿದ್ದಾಗ ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕ ಸ್ವರೂಪದಲ್ಲಿದ್ದ 17,000 ಪೌರ ಕಾರ್ಮಿಕರನ್ನು ಸರ್ಕಾರಿ ನೌಕರರಾಗಿ ನೇಮಕಾತಿ ಮಾಡಿ ಖಾಯಂಗೊಳಿಸಿದ್ದೆ. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಗೆ 26,349 ಪೌರಕಾರ್ಮಿಕರನ್ನು ನೇರನೇಮಕಾತಿ ಮಾಡಿಕೊಂಡಿದ್ದು ನಮ್ಮ ಸರ್ಕಾರದ ಸಾಧನೆ. ಇವರಲ್ಲಿ 16,000 ಪೌರಕಾರ್ಮಿಕರು ಬೆಂಗಳೂರು ನಗರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ.

‘ಮಧ್ಯವರ್ತಿಗಳನ್ನು ತಪ್ಪಿಸಿ 11,000 ಪೌರಕಾರ್ಮಿಕರನ್ನು ನೇರವಾಗಿ ನೇಮಕಾತಿ ಮಾಡಿಕೊಂಡು, ಅವರಿಗೆ ಮಹಾನಗರಪಾಲಿಕೆಯಿಂದಲೇ ಸಂಬಳ ಪಾವತಿಯಾಗುವಂತೆ ಮಾಡಿದ್ದೆವು. ಪೌರಕಾರ್ಮಿಕರಿಗೆ ಮಧ್ಯಾಹ್ನದ ಬಿಸಿಊಟದ ವ್ಯವಸ್ಥೆಯನ್ನೂ ಮಾಡಿದ್ದೆವು. ಪೌರಕಾರ್ಮಿಕ ವಸತಿ ಗೃಹಭಾಗ್ಯ ಯೋಜನೆಯಡಿಯಲ್ಲಿ 3,165 ಪೌರಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸಿದ್ದೆವು. ಮಿಕ್ಕುಳಿದ ಪೌರಕಾರ್ಮಿಕರಿಗೆ ಸರ್ಕಾರದ ಇತರ ವಸತಿ ಯೋಜನೆಗಳಡಿಯಲ್ಲಿ ವಸತಿ ಕಲ್ಪಿಸುವ ಯೋಜನೆ ರೂಪಿಸಿದ್ದೆವು’ ಎಂದು ತಿಳಿಸಿದ್ದಾರೆ.

‘ರಾಜ್ಯದಲ್ಲಿ ಕೆಲಸ ಮಾಡುತ್ತಿರುವ ಸ್ವಚ್ಛತಾ ಕಾರ್ಮಿಕರನ್ನು ಕಾಯಂಗೊಳಿಸಬೇಕು’ ಎಂದು ಆಗ್ರಹಿಸಿ ಪೌರಕಾರ್ಮಿಕರು ರಾಜ್ಯವ್ಯಾಪಿ ಶುಕ್ರವಾರ ಮುಷ್ಕರ ಆರಂಭಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT