ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಠ್ಯಪುಸ್ತಕಕ್ಕೆ ನನ್ನ ಬರಹ ಆಯ್ಕೆ ಮಾಡಿಕೊಳ್ಳಲು ಸಮ್ಮತಿಯಿಲ್ಲ: ಜಿ. ರಾಮಕೃಷ್ಣ

Last Updated 24 ಮೇ 2022, 19:52 IST
ಅಕ್ಷರ ಗಾತ್ರ

ಬೆಂಗಳೂರು: ‘ಶಿಕ್ಷಣವನ್ನು ಕೆಟ್ಟ ರಾಜಕೀಯಕ್ಕೆ ಗುರಿ ಮಾಡಲಾಗುತ್ತಿರುವುದು ಸರ್ವಥಾ ಕ್ಷಮಾರ್ಹವಲ್ಲ.ನನ್ನ ಬರಹವನ್ನು ಪಠ್ಯಪುಸ್ತಕದ ಪರಿಧಿಯಿಂದ ಹೊರಗಿಡುವುದು ಸೂಕ್ತವೆಂದು ಭಾವಿಸಿದ್ದೇನೆ. ನನ್ನ ಯಾವುದಾದರೂ ಬರಹವನ್ನು ಆಯ್ಕೆ ಮಾಡಿಕೊಂಡಿದ್ದರೆ ಅದಕ್ಕೆ ನನ್ನ ಸಮ್ಮತಿ ಇರುವುದಿಲ್ಲ’ ಎಂದು ಸಾಹಿತಿಜಿ. ರಾಮಕೃಷ್ಣ ತಿಳಿಸಿದ್ದಾರೆ.

‘ನಮ್ಮ ರಾಜ್ಯದ ಶಾಲೆಗಳ ಪಠ್ಯಪುಸ್ತಕಗಳ ತಥಾಕಥಿತ ಪರಿಷ್ಕರಣೆಯು ತೀರಾ ಅಪಮಾರ್ಗದಲ್ಲಿ ಸಾಗುತ್ತಿರುವುದು ಜಗಜ್ಜಾಹೀರಾಗಿದೆ. ಅದು ಕೇವಲ ಅಬದ್ಧ ಮತ್ತು ಅವೈಚಾರಿಕ ಪ್ರಕ್ರಿಯೆಯಾಗಿ ಉಳಿದಿಲ್ಲ. ಮಕ್ಕಳಿಗೆ ವಿಷ ಉಣಿಸುವುದು ಬೌದ್ಧಿಕ ಕ್ಷೇತ್ರದಲ್ಲಿ ದುರಂತ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT