ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿ20 ಅತಿಥಿಗಳ ಓಡಾಟ: 55 ಭಿಕ್ಷುಕರಿಗೆ ಪುನರ್ವಸತಿ

Last Updated 23 ಫೆಬ್ರವರಿ 2023, 22:31 IST
ಅಕ್ಷರ ಗಾತ್ರ

ಬೆಂಗಳೂರು: ಜಿ– 20 ಶೃಂಗಸಭೆಯ ಅತಿಥಿಗಳ ಓಡಾಟದ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು, 55 ಭಿಕ್ಷುಕರನ್ನು ರಕ್ಷಿಸಿ ಪುನರ್ವಸತಿ ಕಲ್ಪಿಸಿದ್ದಾರೆ.

‘ನಗರದ ಪ್ರಮುಖ ವೃತ್ತ, ರಸ್ತೆ ಹಾಗೂ ಪ್ರೇಕ್ಷಣೀಯ ಸ್ಥಳಗಳ ಎದುರು ಹಲವರು ಭಿಕ್ಷಾಟನೆಯಲ್ಲಿ ತೊಡಗಿದ್ದರು. ಬುಧವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ವಿಶೇಷ ಕಾರ್ಯಾಚರಣೆ ನಡೆಸಿ, 55 ಜನರನ್ನು ರಕ್ಷಿಸಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.

‘ಮಕ್ಕಳನ್ನು ಕಳ್ಳ ಸಾಗಾಣಿಕೆ ಮೂಲಕ ಕರೆತಂದು ಭಿಕ್ಷಾಟನೆಗೆ ಬಳಸಿಕೊಳ್ಳಲಾಗುತ್ತಿತ್ತು. ಕೆಲ ಮಕ್ಕಳಿಗೆ ನಿದ್ದೆ ಬರುವ ಔಷಧ ಕುಡಿಸಿ ಮಲಗಿಸಲಾಗುತ್ತಿತ್ತು. ಇಂಥ ಭಿಕ್ಷಾಟನೆ ಜಾಲದಿಂದ ಜನರಿಗೂ ತೊಂದರೆ ಉಂಟಾಗಿತ್ತು.’

‘ವಿಶೇಷ ಕಾರ್ಯಾಚರಣೆ ವೇಳೆ ಮಕ್ಕಳು ಹಾಗೂ ವೃದ್ಧರನ್ನು ರಕ್ಷಿಸಲಾಗಿದೆ. ಅವರೆಲ್ಲರನ್ನೂ ಪುನರ್ವಸತಿ ಕೇಂದ್ರಗಳ ಸುಪರ್ದಿಗೆ ಒಪ್ಪಿಸಲಾಗಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT