ಗದಗ: ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರ ಪತ್ನಿ ಇಲ್ಲಿನ ಕೆ.ಸಿ. ರಾಣಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

‘ಶನಿವಾರ ರಾತ್ರಿ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಹಜ ಹೆರಿಗೆ ಮಾಡಿಸಲು ವೈದ್ಯರು ಸಾಕಷ್ಟು ಪ್ರಯತ್ನಪಟ್ಟರು. ಆದರೆ, ಸಾಧ್ಯವಾಗಲಿಲ್ಲ. ಭಾನುವಾರ ಬೆಳಿಗ್ಗೆ 5.30ಕ್ಕೆ ಸಿಸೇರಿಯನ್ ಮಾಡಲಾಯಿತು. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯದಿಂದ ಇದ್ದಾರೆ’ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

‘ಇಲ್ಲಿನ ಆಸ್ಪತ್ರೆಯಲ್ಲಿ ಉತ್ತಮ ವೈದ್ಯರಿದ್ದಾರೆ. ಸೌಲಭ್ಯವೂ ಚೆನ್ನಾಗಿದೆ. ಈ ಹಿನ್ನೆಲೆಯಲ್ಲಿ ಪತ್ನಿಯ ಹೆರಿಗೆಗೆ ಸರ್ಕಾರಿ ಆಸ್ಪತ್ರೆಯನ್ನೇ ಆಯ್ಕೆ ಮಾಡಿಕೊಂಡೆ’ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.