ಸೋಮವಾರ, ಮಾರ್ಚ್ 27, 2023
31 °C
ಎಂ.ಎಸ್‌. ಸಿಂಧೂರ, ಅಶೋಕ ಚಂದರಗಿ, ಎಡನೀರು ಮಠ ಆಯ್ಕೆ

ಅಶೋಕ, ಸಿಂಧೂರಗೆ ಗಡಿನಾಡ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು 2022–23ನೇ ಸಾಲಿನ ಗಡಿನಾಡ ಚೇತನ ಪ್ರಶಸ್ತಿಯನ್ನು ಶುಕ್ರವಾರ ಪ್ರಕಟಿಸಿದೆ.

‘ಭಾಲ್ಕಿಯ ಡಾ. ಚನ್ನಬಸವ ಪಟ್ಟದ ದೇವರು’, ‘ಕಯ್ಯಾರ ಕಿಞ್ಞಣ್ಣ ರೈ’ ಮತ್ತು ‘ಜಯದೇವಿ ತಾಯಿ ಲಿಗಾಡೆ’ ಹೆಸರಿನಲ್ಲಿ ಗಡಿನಾಡ ಚೇತನ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ.

‘ಭಾಲ್ಕಿಯ ಡಾ. ಚನ್ನಬಸವ ಪಟ್ಟದೇವರು’ ಹೆಸರಿನ ಗಡಿನಾಡ ಚೇತನ ಪ್ರಶಸ್ತಿಗೆ ಮಹಾರಾಷ್ಟ್ರದ ಜತ್ತ ತಾಲ್ಲೂಕಿನ ಗಡಿನಾಡಿನ ಕನ್ನಡ ಹೋರಾಟಗಾರ ಮತ್ತು ನಿವೃತ್ತ ಕನ್ನಡ ಶಿಕ್ಷಕ ಎಂ.ಎಸ್‌. ಸಿಂಧೂರ ಅವರು ಆಯ್ಕೆಯಾಗಿದ್ದಾರೆ.‌

ಕನ್ನಡದ ಏಕೀಕರಣ ಹೋರಾಟದ ವೀರಾಗ್ರಣಿ ಡಾ.ಜಯದೇವಿತಾಯಿ ಲಿಗಾಡೆ ಹೆಸರಿನ ಪ್ರಶಸ್ತಿಗೆ ಗಡಿನಾಡ ಬೆಳಗಾವಿಯಲ್ಲಿ ಕನ್ನಡಪರ ಹೋರಾಟಗಳಲ್ಲಿ ಕ್ರಿಯಾಶೀಲರಾಗಿರುವ ಅಶೋಕ ಚಂದರಗಿ ಅವರು ಆಯ್ಕೆಯಾಗಿದ್ದಾರೆ.

‘ಡಾ. ಕಯ್ಯಾರ ಕಿಞ್ಞಣ್ಣ ರೈ’ ಹೆಸರಿನ ಪ್ರಶಸ್ತಿಗೆ ಕನ್ನಡ ಭಾಷೆ, ಸಂಸ್ಕೃತಿ ಮತ್ತು ಕನ್ನಡ ಪರ ಹೋರಾಟಗಳಲ್ಲಿ ನಿರತವಾಗಿರುವ ಕಾಸರಗೋಡಿನ ಎಡನೀರು ಮಠವನ್ನು ಆಯ್ಕೆ ಮಾಡಲಾಗಿದೆ.

‌ಈ ಮೂರು ಪ್ರಶಸ್ತಿಗಳನ್ನು ಫೆ.2ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ಸಂಜೆ 5.30ಕ್ಕೆ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರದಾನ ಮಾಡಲಿದ್ದಾರೆ.

ಈ ಪ್ರಶಸ್ತಿಗಳ ಆಯ್ಕೆಗೆ ಸಾಹಿತಿ ಡಾ. ದೊಡ್ಡರಂಗೇಗೌಡ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು ಎಂದು ಪ್ರಾಧಿಕಾರದ ಅಧ್ಯಕ್ಷ ಸಿ. ಸೋಮಶೇಖರ್‌ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು