ಶುಕ್ರವಾರ, ಆಗಸ್ಟ್ 19, 2022
22 °C

ಗಣಪತಿ ಆತ್ಮಹತ್ಯೆ: ಮೊಹಂತಿ ವಿಚಾರಣೆಗೆ ತಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ಪ್ರಣವ್ ಮೊಹಂತಿ ವಿರುದ್ಧ ಸಂಜ್ಞೆಯ ಅಪರಾಧ ಎಂದು ಪರಿಗಣಿಸಿದ್ದ ಸಿಬಿಐ ವಿಶೇಷ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.

ಕರ್ತವ್ಯ ನಿರ್ವಹಣೆ ವೇಳೆ ಈ ಕೃತ್ಯ ಎಸಗಲಾಗಿದೆ ಎಂದಾದರೆ ವಿಚಾರಣೆಗೆ ಪೂರ್ವಾನುಮತಿ ಕಡ್ಡಾಯ ಎಂಬ ಸುಪ್ರೀಂ ಕೋರ್ಟ್ ತೀರ್ಪುನ್ನು ಅರ್ಜಿದಾರರಾದ ಮೊಹಂತಿ ಪರ ವಕೀಲರು ಉಲ್ಲೇಖಿಸಿದರು. 

ಈ ವಾದ ಪರಿಗಣನೆಗೆ ಅರ್ಹವಾಗಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಮೂರ್ತಿ ಜಿ. ನರೇಂದರ್ ಅವರು, ವಿಶೇಷ ನ್ಯಾಯಾಲಯದ ಆದೇಶ ಮತ್ತು ಪ್ರಕರಣದ ಸಂಬಂಧ ವಿಚಾರಣೆಗೆ ತಡೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.