ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡುವ ವಿಷಯದಲ್ಲಿ ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೇ ನೀಡುವ ನಿರ್ಣಯವನ್ನು ಶನಿವಾರ ನಡೆದ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.

‘ಗಣೇಶೋತ್ಸವದ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆಯಿತು. ಕೆಲವು ಜಿಲ್ಲೆಗಳಲ್ಲಿ ಇನ್ನೂ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿದೆ. ಕೋವಿಡ್ ನಿಯಂತ್ರಣಕ್ಕೆ ತೊಂದರೆ ಆಗದಂತೆ ನಿರ್ಧಾರ ಕೈಗೊಳ್ಳಬೇಕಿದೆ. ಆದ್ದರಿಂದ ಗಣೇಶೋತ್ಸವಕ್ಕೆ ಅನುಮತಿ ನೀಡುವುದನ್ನು ಮುಖ್ಯಮಂತ್ರಿಯವರ ವಿವೇಚನೆಗೆ ಬಿಡಲು ಒಮ್ಮತದ ನಿರ್ಧಾರ ಕೈಗೊಳ್ಳಲಾಯಿತು’ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.

ಮುಖ್ಯಮಂತ್ರಿಯವರು ರಾಜ್ಯ ಎಲ್ಲ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ. ಕೋವಿಡ್ ನಿಯಂತ್ರಣ ಸ್ಥಿತಿ ಕುರಿತು ಸಂಪೂರ್ಣ ಮಾಹಿತಿ ಪಡೆದ ಬಳಿಕ ಅಂತಿಮ ನಿರ್ಧಾರಕ್ಕೆ ಬರುತ್ತಾರೆ. ಗಣೇಶೋತ್ಸವಕ್ಕೆ ಅನುಮತಿ ನೀಡುವುದಕ್ಕೆ ಸಂಬಂಧಿಸಿದ ನಿರ್ಧಾರವನ್ನು ಎರಡು ದಿನಗಳಲ್ಲಿ ಪ್ರಕಟಿಸಲಿದ್ದಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.