ಶುಕ್ರವಾರ, ಮೇ 20, 2022
24 °C

ಕಾಂಗ್ರೆಸ್ಸಿಗರ ಅಲ್ಪಜ್ಞಾನ: ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಕಾಂಗ್ರೆಸ್‌ ನಾಯಕರು ಅಜ್ಞಾನದ ಹೇಳಿಕೆಗಳನ್ನು ನೀಡುವ ಮೂಲಕ ಅಲ್ಪಜ್ಞಾನಿಗಳಂತೆ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ವಕ್ತಾರ ಕ್ಯಾಪ್ಟನ್‌ ಕಾರ್ಣಿಕ್‌ ಹೇಳಿದ್ದಾರೆ.

ಪ್ರಧಾನಿಯವರ ಕುರಿತು ಕಾಂಗ್ರೆಸ್‌ ನಾಯಕ ದಿನೇಶ್‌ ಗುಂಡೂರಾವ್‌ ಅವರ ಹೇಳಿಕೆಗಳು ಹತಾಶೆಯ ಪ್ರತೀಕವಾಗಿದೆ. ಉಪಚುನಾವಣೆಗಳು ಮತ್ತು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್‌ ಬೇರೆ ದಾರಿ ಇಲ್ಲದೇ ಪ್ರಧಾನಿಯವರನ್ನು ಟೀಕಿಸುತ್ತಿದೆ ಎಂದು ತಿಳಿಸಿದರು.

ಪ್ರಧಾನಿಯವರನ್ನು ಹಿಟ್ಲರ್‌ಗೆ ಹೋಲಿಸುವುದು ದಿನೇಶ್‌ ಅವರ ಅಜ್ಞಾನಕ್ಕೆ ಸ್ಪಷ್ಟ ನಿದರ್ಶನ. ಮೋದಿ ಅವರು ಕೊರೋನಾ ಸಂಕಷ್ಟವನ್ನು ನಿಭಾಯಿಸಿದ್ದನ್ನು ಮತ್ತು ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಿದ್ದನ್ನು ವಿಶ್ವವೇ ಮೆಚ್ಚಿಕೊಂಡಿದೆ ಎಂದು ಹೇಳಿದರು.

ಕೃಷಿ ಸುಧಾರಣೆಗಳ ಮಸೂದೆಗಳ ಮೂಲಕ ರೈತರ ಆದಾಯ ದ್ವಿಗುಣಗೊಳಿ
ಸಲು, ಮಧ್ಯವರ್ತಿಗಳು ಮತ್ತು ದಲ್ಲಾಳಿಗಳನ್ನು ದೂರವಿಡಲು ಕೇಂದ್ರ ಸರ್ಕಾರ ಮುಂದಾಗಿದೆ. ದಲ್ಲಾಳಿಗಳನ್ನೇ ನೆಚ್ಚಿಕೊಂಡಿರುವ ದಿನೇಶ್‌ ಗುಂಡೂರಾವ್‌ ಅವರು ಇದರಿಂದ ನಿರಾಶರಾಗಿದ್ದಾರೆ. ಅದನ್ನು ಪ್ರತಿಬಿಂಬಿ
ಸುವ ರೀತಿಯಲ್ಲಿ ಅವರು ಪ್ರಧಾನಿಯನ್ನು ಟೀಕಿಸಿದ್ದಾರೆ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.