ಬುಧವಾರ, ಆಗಸ್ಟ್ 17, 2022
25 °C

ಅತ್ಯಾಚಾರ: ನಾಲ್ವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಾಯಿಯ ಆರೈಕೆಯಲ್ಲಿ ತೊಡಗಿದ್ದ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದ ಆಸ್ಪ‍ತ್ರೆಯ ವಾರ್ಡ್‌ಬಾಯ್ ಮನೋಜ್‌, ಆತನ ಮೂವರು ಸ್ನೇಹಿತರನ್ನು (ಎಲ್ಲರೂ 23ರ ವಯಸ್ಸಿನವರು) ಪೊಲೀಸರು ಬಂಧಿಸಿದ್ದಾರೆ.

ಗರ್ಭಪಾತದ ನಂತರ ರಕ್ತಹೀನತೆಗೆ ಒಳಗಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ಮಹಿಳೆ ತಿಂಗಳ ಹಿಂದೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ತಾಯಿಯ ಜತೆ ಇದ್ದ ಮಗಳಿಗೆ ಮನೋಜ್ ನಿತ್ಯವೂ ಸಹಾಯ ಮಾಡುತ್ತಿದ್ದ. ಇಬ್ಬರ ಮಧ್ಯೆ ಸಲುಗೆ ಬೆಳೆದಿತ್ತು. ಅದನ್ನೇ ದುರುಪಯೋಗ ಪಡಿಸಿಕೊಂಡ ಆರೋಪಿ, ಸ್ನೇಹಿತರಾದ ಪ್ರಜ್ವಲ್‌, ವಿನಯ್, ಸಂದೀಪ್‌ ಜತೆ ಸಾಗರ ರಸ್ತೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿರುವುದು ತನಿಖೆಯಿಂದ ತಿಳಿದಿದೆ ಎಂದು ಪೊಲೀಸರು ತಿಳಿಸಿದರು.

ಬಾಲಕಿಗೆ ಖಿನ್ನತೆ: ಘಟನೆಯ ನಂತರ ಬಾಲಕಿ ಖಿನ್ನತೆಗೆ ಒಳಗಾಗಿದ್ದಾಳೆ. ಆರಂಭದಲ್ಲಿ ಪೊಲೀಸರ ಪ್ರಶ್ನೆಗಳಿಗೆ ನಿರ್ಭಯವಾಗಿ ಉತ್ತರಿಸುತ್ತಿದ್ದ ಆಕೆ ನಂತರ ಮೌನಕ್ಕೆ ಶರಣಾಗಿದ್ದು, ಮಾತನಾಡಲು ನಿರಾಕರಿಸುತ್ತಿದ್ದಾಳೆ. ಮೆಗ್ಗಾನ್ ಆಸ್ಪತ್ರೆಯ ಪ್ರತ್ಯೇಕ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಿದ ನಂತರ ಸಖಿ ಕೇಂದ್ರಕ್ಕೆ ಸ್ಥಳಾಂತ ರಿಸಲಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು