ಮಂಗಳವಾರ, ಮಾರ್ಚ್ 9, 2021
32 °C
ಗ್ರಾ. ಪಂ. ಚನಾವಣೆ ಫಲಿತಾಂಶ

ಜೆಡಿಎಸ್‌ ಮೇಲೆ ವಿಶ್ವಾಸವಿಟ್ಟ ಮತದಾರರಿಗೆ ಕೃತಜ್ಞತೆಗಳು –ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಷ್ಟ್ರೀಯ ಪಕ್ಷಗಳ ಹಣ, ಅಧಿಕಾರದ ಹೊರತಾಗಿಯೂ ಪ್ರಾದೇಶಿಕ ಪಕ್ಷ ಜೆಡಿಎಸ್‌ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಪಕ್ಷದ ಅಭ್ಯರ್ಥಿಗಳ ಮೇಲೆ ವಿಶ್ವಾಸವಿಟ್ಟ ಮತದಾರರಿಗೆ ಕೃತಜ್ಞತೆಗಳು ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ. 

ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಗೆದ್ದ ಎಲ್ಲಾ ಅಭ್ಯರ್ಥಿಗಳಿಗೆ ಅಭಿನಂದನೆಗಳು ಹಾಗೇ ಸೋತರೂ, ಹೋರಾಟ ನಡೆಸಿದ ಅಭ್ಯರ್ಥಿಗಳಿಗೆ ನನ್ನ ಬೆಂಬಲ ಸದಾ ಇರಲಿದೆ ಎಂದು ಅವರು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಪಕ್ಷವು ಈ ಚುನಾವಣೆಯಲ್ಲಿ ಈ ಹಂತದ ಸಾಧನೆ ಮಾಡಲು ನೆರವಾದವರು ನಮ್ಮ ತಳಮಟ್ಟದ ಕಾರ್ಯಕರ್ತರು. ರಾಜಕೀಯದ ಪ್ರತಿಕೂಲ ಪರಿಸ್ಥಿತಿಯ ನಡುವೆಯೂ ಕಾರ್ಯಕರ್ತರು ಕೆಚ್ಚೆದೆಯ ಹೋರಾಟ ತೋರಿದ್ದರ ಫಲವಾಗಿಯೇ ನಮ್ಮ ಅಭ್ಯರ್ಥಿಗಳು ಚುನಾವಣೆಯಲ್ಲಿ ಜಯಿಸಿದ್ದಾರೆ.

ರಾಜಕೀಯ ಸಂದಿಗ್ದ ಸ್ಥಿತಿಯಲ್ಲಿಯೂ ಪಕ್ಷ ತಳ ಮಟ್ಟದಲ್ಲಿಯೂ ಸ್ಥಿರ, ದೃಢವಾಗಿದೆ ಎಂದು ತೋರಿಸಿದ ಕಾರ್ಯಕರ್ತ ಸೋದರರಿಗೆ ನಾನು ಸದಾ ಋಣಿಯಾಗಿ ಇರುವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಚುನಾವಣೆಯಲ್ಲಿ ಗೆದ್ದಿರುವ ಜೆಡಿಎಸ್‌ ಬೆಂಬಲಿತ ಅಭ್ಯರ್ಥಿಗಳು ಗ್ರಾಮಗಳ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಲಿ. ಸ್ವಾವಲಂಬಿ ಗ್ರಾಮೀಣ ಭಾರತದ ಪ್ರಗತಿಗೆ ಗಮನಾರ್ಹ ಕೊಡುಗೆ ನೀಡಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

ಜೆಡಿಎಸ್‌ ಬೆಂಬಲಿತ ಮತ್ತು ಇತರ ಸದಸ್ಯರು ತಮ್ಮ ಗ್ರಾಮ ಪಂಚಾಯಿತಿಯನ್ನು ಮಾದರಿಯಾಗಿ ರೂಪಿಸಬೇಕು ಎಂದು ಕುಮಾರಸ್ವಾಮಿ ಟ್ವೀಟ್‌ ಮೂಲಕ ಸಲಹೆ ಮಾಡಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು