ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿಂಗಳೊಳಗೆ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ಫಲಿತಾಂಶ: ಕೆಪಿಎಸ್‌ಸಿ

ನೂರಾರು ಉದ್ಯೋಗಾಕಾಂಕ್ಷಿಗಳಿಂದ ‘ಬಾಗಿಲು ತಟ್ಟಿ ಪ್ರತಿಭಟನೆ’
Last Updated 31 ಮೇ 2022, 20:36 IST
ಅಕ್ಷರ ಗಾತ್ರ

ಬೆಂಗಳೂರು: ‘2017ನೇ ಸಾಲಿನ 106 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳಿಗೆ ನಡೆದ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಜೂನ್ ತಿಂಗಳ ಒಳಗೆ ಪ್ರಕಟಿಸುವುದಾಗಿ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷ ಮತ್ತು ಕಾರ್ಯದರ್ಶಿ ಆಶ್ವಾಸನೆ ನೀಡಿದ್ದಾರೆ’ ಎಂದು ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ತಿಳಿಸಿದರು.

ನೂರಾರು ಉದ್ಯೋಗಾಕಾಂಕ್ಷಿಗಳ ಜೊತೆಗೆ ಕೆಪಿಎಸ್‌ಸಿಮುಖ್ಯದ್ವಾರದ ಬಳಿ ನಿಂತು ಮಾಹಿತಿ ನೀಡುವಂತೆ ಆಗ್ರಹಿಸಿ ಮಂಗಳವಾರ ಅವರು ‘ಬಾಗಿಲು ತಟ್ಟಿ ಪ್ರತಿಭಟನೆ’ ನಡೆಸಿದರು. ಈ ವೇಳೆ ಕೆಪಿಎಸ್‌ಸಿ ಕಾರ್ಯದರ್ಶಿ ಈ ವಿಷಯ ತಿಳಿಸಿದ್ದಾರೆ ಎಂದರು.

‘150 ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳಿಗೆ 10 ದಿನಗಳಲ್ಲಿ ಹಾಗೂ 1,136 ಎಫ್‌ಡಿಎ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು ಜೂನ್ 10ರ ಒಳಗೆ, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪದವೀಧರ ಚಿತ್ರಕಲಾ ಶಿಕ್ಷಕರ ಹುದ್ದೆಗಳಿಗೆ ನಡೆದ ಪರೀಕ್ಷೆ ಫಲಿತಾಂಶವನ್ನು 15 ದಿನಗಳಲ್ಲಿ ಪ್ರಕಟಿಸುವುದಾಗಿ ಭರವಸೆ ಸಿಕ್ಕಿದೆ’
ಎಂದರು.

‘ಎಸ್‌ಡಿಎ 1,323 ಹುದ್ದೆಗಳಿಗೆ ನಡೆದ ಪರೀಕ್ಷೆ ಮತ್ತು ಲೋಕೋಪಯೋಗಿ ಇಲಾಖೆಯ ಕಿರಿಯ ಮತ್ತು ಸಹಾಯಕ ಎಂಜಿನಿಯರ್‌ ಒಟ್ಟು 990 ಹುದ್ದೆಗಳಿಗೆ ನಡೆದ ಪರೀಕ್ಷೆಯ ಮೌಲ್ಯಮಾಪನ ನಡೆಯುತ್ತಿದ್ದು ಶೀಘ್ರದಲ್ಲಿ ಫಲಿತಾಂಶ ನೀಡಲಾಗುವುದು. ಎಲ್ಲ ವಿವರಗಳನ್ನು ಎರಡು ದಿನಗಳಲ್ಲಿ ಆಯೋಗದ ಜಾಲತಾಣದಲ್ಲಿ ಪ್ರಕಟಿಸುವುದಾಗಿ ಕಾರ್ಯದರ್ಶಿ ತಿಳಿಸಿದ್ದಾರೆ’ ಎಂದರು.

‘ಕೆಪಿಎಸ್‌ಸಿಯಲ್ಲಿ ಸದಸ್ಯರು ಹಾಗೂ ಆಡಳಿತ ವಿಭಾಗದ ನಡುವೆ ಸಮನ್ವಯ ಕೊರತೆಯಿಂದಾಗಿ ಕಾರ್ಯನಿರ್ವಹಣೆ ಮೇಲೆ ನಕಾರಾತ್ಮಕ ಪರಿಣಾಮಗಳು ಉಂಟಾಗಿವೆ. ಅವುಗಳ ತಾರ್ಕಿಕ ಅಂತ್ಯ ಆಗದ ಹೊರತು ಸಂಸ್ಥೆಯ ಕುರಿತ ಭಾವನೆ ಬದಲಾಗದು. ಈ ಬಗ್ಗೆ ಮುಖ್ಯಮಂತ್ರಿ ಜೊತೆ ಮಾತನಾಡುತ್ತೇನೆ. ಕೆಪಿಎಸ್‌ಸಿ ತನ್ನ ಕಾರ್ಯವೈಖರಿ ಬದಲಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT