ಶನಿವಾರ, ಫೆಬ್ರವರಿ 4, 2023
28 °C
ವೈದ್ಯಕೀಯ ಸಿಬ್ಬಂದಿ ಚಲನವಲನದ ಮೇಲೆ ನಿಗಾ ಇಡಲು ವ್ಯವಸ್ಥೆ: ಸಚಿವ

ಹಾಜರಾತಿ ನಿಗಾ ಇಡಲು ಸರ್ಕಾರಿ ಆಸ್ಪತ್ರೆಯಲ್ಲಿ ಜಿಯೊ ಟ್ಯಾಗಿಂಗ್: ಸಚಿವ ಸುಧಾಕರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಸರ್ಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ವೈದ್ಯರು ಹಾಗೂ ಸಿಬ್ಬಂದಿ ಹಾಜರಾತಿ ಮತ್ತು ಚಲನವಲನದ ಮೇಲೆ ನಿಗಾ ಇಡಲು ಸದ್ಯದಲ್ಲಿಯೇ ಜಿಯೊ ಟ್ಯಾಗಿಂಗ್ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ. 

ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿಯಲ್ಲಿ ಶುಕ್ರವಾರ ಚಿಕಿತ್ಸೆ ಸಿಗದೆ ಬಾಲಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಲು ಮಾಡಿರುವ ಟ್ವೀಟ್‌ನಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ. ಜಿಯೊ ಟ್ಯಾಗಿಂಗ್‌ ವ್ಯವಸ್ಥೆಯಿಂದ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಯಲ್ಲಿ ಹೊಣೆಗಾರಿಕೆ ಹಾಗೂ ಶಿಸ್ತು ಹೆಚ್ಚಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು