ಮಂಗಳವಾರ, ಮೇ 17, 2022
23 °C

ಬೆಂಗಳೂರಿನಲ್ಲಿ ಜರ್ಮನ್‌ ವಹಿವಾಟು ಕಚೇರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭಾರತ ಮತ್ತು ಜರ್ಮನಿಯ ನಾರ್ತ್‌ ರಿನೆ–ವೆಸ್ಟ್‌ ಫಾಲಿಯಾ ಪ್ರಾಂತ್ಯದ ನಡುವೆ ತಂತ್ರಜ್ಞಾನ ಸಹಭಾಗಿತ್ವವನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ಪೂರ್ಣ ಪ್ರಮಾಣದ ಕಚೇರಿಯನ್ನು 2022 ರ ಆರಂಭದಲ್ಲಿ ಅಧಿಕೃತವಾಗಿ ಆರಂಭಿಸಲಾಗುವುದು ಎಂದು ಆ ಪ್ರಾಂತ್ಯದ ಆರ್ಥಿಕ, ನಾವೀನ್ಯ, ಡಿಜಿಟಲೀಕರಣ ಮತ್ತು ಇಂಧನ ಸಚಿವ ಆಂಡ್ರಿಯಾಸ್‌ ಪಿಂಕ್ವರ್ಟ್‌ ಪ್ರಕಟಿಸಿದರು.

ಇದು ಭಾರತ ಮತ್ತು ಜರ್ಮನಿಯ ಕಂಪನಿಗಳಿಗೆ ಹೆಬ್ಬಾಗಿಲಾಗಲಿದೆ ಎಂದು ಬೆಂಗಳೂರು ತಂತ್ರಜ್ಞಾನ ಶೃಂಗದಲ್ಲಿ ವರ್ಚ್ಯುವಲ್ ಭಾಷಣದಲ್ಲಿ ಈ ವಿಷಯ ತಿಳಿಸಿದರು.

‘ಭಾರತದ ನವೋದ್ಯಮ ಮತ್ತು ಇತರ ಕಂಪನಿಗಳಿಗೆ ತಮ್ಮ ಪ್ರಾಂತ್ಯಕ್ಕೆ ಮುಕ್ತ ಸ್ವಾಗತವಿದೆ. ಭಾರತದಲ್ಲಿ ಬೆಂಗಳೂರು ಮತ್ತು ಕರ್ನಾಟಕ ಹೇಗೆ ತಂತ್ರಜ್ಞಾನದ ತೊಟ್ಟಿಲಾಗಿದೆಯೋ ಹಾಗೆ ಜರ್ಮನಿಯಲ್ಲಿ ನಮ್ಮ ಪ್ರಾಂತ್ಯವು ತಾಂತ್ರಿಕ ನೆಲೆಯಾಗಿದೆ’ ಎಂದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಐಟಿ, ಬಿಟಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಭಾರತ ಮತ್ತು ಜರ್ಮನಿ 20 ಒಡಂಬಡಿಕೆಗಳಿಗೆ ಸಹಿ ಹಾಕಿವೆ. ಕೃತಕ ಬುದ್ಧಿಮತ್ತೆ, ಮೆಷಿನ್ ಲರ್ನಿಂಗ್‌, ಐಒಟಿ, ಅನಲಿಟಿಕ್ಸ್‌, ರೋಬೋಟಿಕ್ಸ್‌, ಡೇಟಾ ಸೈನ್ಸ್‌ ಮುಂತಾದ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ರಾಜ್ಯವನ್ನು ಜ್ಞಾನಧಾರಿತ ಸಮಾಜವನ್ನಾಗಿ ಕಟ್ಟಲಾಗುವುದು ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು