ಶುಕ್ರವಾರ, ಸೆಪ್ಟೆಂಬರ್ 24, 2021
21 °C

ಜಿ. ಪಂಚಾಯಿತಿ,‌ ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಸಿದ್ಧರಾಗಿ: ಬಿ.ಎಸ್.ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಪಕ್ಷದ ಎಲ್ಲರೂ ಸಿದ್ಧರಾಗಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಜೆಪಿ ಮುಖಂಡರಿಗೆ ಕರೆ ನೀಡಿದರು.

ವರ್ಚ್ಯುಯಲ್ ಆಗಿ ಶನಿವಾರ ನಡೆಯುತ್ತಿರುವ ಬಿಜೆಪಿ‌ ರಾಜ್ಯ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದ ಅವರು, 'ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ದಿ‌ನಗಳಿಂದಲೂ ಹಲವು ಸವಾಲುಗಳು ಎದುರಾಗಿವೆ. ಎಲ್ಲವನ್ನೂ ದಿಟ್ಟವಾಗಿ ಎದುರಿಸಿ, ಅಭಿವೃದ್ಧಿ ಯೋಜನೆಗಳನ್ನು ಮುನ್ನಡೆಸಲಾಗುತ್ತಿದೆ' ಎಂದು ಹೇಳಿದರು.

ಆರಂಭದಲ್ಲೇ ಪ್ರವಾಹದಿಂದ ತೊಂದರೆ ಆಗಿತ್ತು. ಎರಡು ವರ್ಷಗಳಿಂದ ಕೋವಿಡ್ ಸಂಕಷ್ಟವಿದೆ.‌ ಕೋವಿಡ್ ಮೊದಲ ಮತ್ತು ಎರಡನೇ ಅಲೆಗಳನ್ನು ಸರ್ಕಾರ ಸಮರ್ಥವಾಗಿ ನಿಭಾಯಿಸಿದೆ. ಆರ್ಥಿಕ ಸಂಕಷ್ಟದ ನಡುವೆಯೂ ಜನರಿಗೆ ಪರಿಹಾರ ನೀಡಲಾಗಿದೆ. ಈಗ‌ ಲಸಿಕಾ ಅಭಿಯಾನವೂ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಯಡಿಯೂರಪ್ಪ ಹೇಳಿದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮತ್ತು ರಾಜ್ಯ ಘಟಕದ ಪದಾಧಿಕಾರಿಗಳು ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು