ಬುಧವಾರ, ಮೇ 12, 2021
17 °C

ಮೂರನೇ ಅಲೆ ತಪ್ಪಿಸಲು ಲಸಿಕೆ ಹಾಕಿಸಿಕೊಳ್ಳಿ: ಸಚಿವ ಡಾ.ಕೆ.ಸುಧಾಕರ್‌ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್‌ ಮೂರನೇ ಅಲೆ ತಪ್ಪಿಸಲು ಸಾರ್ವಜನಿಕರು ಕಡ್ಡಾಯವಾಗಿ ಲಸಿಕೆಯನ್ನು ಹಾಕಿಸಿಕೊಳ್ಳಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರು ಮನವಿ ಮಾಡಿದ್ದಾರೆ.

ಲಸಿಕೆ ಹಾಕಿಸಿಕೊಳ್ಳುವ ಬಗ್ಗೆ ಉದಾಸೀನತೆ ಬಿಡಬೇಕು. ಇಲ್ಲವಾದರೆ ಮೂರನೇ ಅಲೆ ತಡೆಯಲು ಸಾಧ್ಯವಿಲ್ಲ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.

ಲಸಿಕೆ ಹಾಕಿಸಿಕೊಂಡರೆ ಕೋವಿಡ್‌ ಸೋಂಕು ತಗುಲುವುದಿಲ್ಲ ಎಂದು ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಆದರೆ, ಸೋಂಕು ತಗುಲುವುದು ಕಡಿಮೆ ಆಗುತ್ತದೆ. ಸಾವಿನ ಪ್ರಮಾಣ ಕಡಿಮೆಯಾಗುತ್ತದೆ. ಹಲವು ದೇಶಗಳಲ್ಲಿ ಈಗಾಗಲೇ ಮೂರನೇ ಅಲೆ ಕಾಣಿಸಿಕೊಂಡಿದೆ. ನಮ್ಮಲ್ಲಿ ಅದನ್ನು ತಡೆಯಬೇಕಿದ್ದರೆ, ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು ಎಂದರು.

ಬೆಂಗಳೂರಿನ ಕೆಲವು ತಾರಾ ಹೋಟೆಲ್‌ಗಳಲ್ಲಿ ತಾತ್ಕಾಲಿಕ ಕೋವಿಡ್‌ ಚಿಕಿತ್ಸಾ ಕೇಂದ್ರಗಳನ್ನು ತೆರೆಯಲಾಗುವುದು. ಇದಕ್ಕಾಗಿ 10 ಹೋಟೆಲ್‌ಗಳ ಜತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಅಲ್ಪ ಪ್ರಮಾಣದ ರೋಗ ಲಕ್ಷಣ ಇರುವವರಿಗೆ ಅಲ್ಲಿ ಚಿಕಿತ್ಸೆ ನೀಡಲಾಗುವುದು. ಈ ಮೂಲಕ ಮೂರು ಸಾವಿರ ಹಾಸಿಗೆಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಸುಧಾಕರ್‌ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು