ಶುಕ್ರವಾರ, ಸೆಪ್ಟೆಂಬರ್ 30, 2022
27 °C

ಕೃಷಿ ಕಾಯ್ದೆ ಹಿಂಪಡೆಯಲು ಆಗ್ರಹ: 12ರಂದು ವಿಧಾನಸೌಧಕ್ಕೆ ಮುತ್ತಿಗೆ– ರೈತ ಸಂಘ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ‘ಕೃಷಿ ಕಾಯ್ದೆ ಹಿಂಪಡೆಯಬೇಕು. ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ಸೆ. 12ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರಧಾನ ಕಾರ್ಯದರ್ಶಿ ಜೆ.ಕಾರ್ತಿಕ್ ತಿಳಿಸಿದರು.

ದೇಶದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಿರಂತರವಾಗಿ ರೈತರ ಮೇಲೆ ಶೋಷಣೆ ಮಾಡುತ್ತಿದೆ. ಈ ಹಿಂದೆ ಮೂರು ಕೃಷಿ ಕಾಯ್ದೆಗಳನ್ನು ಜಾರಿಗೆ ತರಲಾಗಿತ್ತು. ರೈತರ ಭಾರಿ ವಿರೋಧದಿಂದ ಕೇಂದ್ರ ಸರ್ಕಾರ ಅದನ್ನು ಹಿಂಪಡೆಯಿತು. ಆದರೆ, ರಾಜ್ಯದಲ್ಲಿ ಹಿಂಪಡೆದಿಲ್ಲ. ಈಗ ವಿದ್ಯುತ್‌ ಕ್ಷೇತ್ರವನ್ನು ಖಾಸಗೀಕರಣಗೊಳಿಸಿ, ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಸಿ ರೈತರನ್ನು ಒಕ್ಕಲುತನದಿಂದ ಹೊರದಬ್ಬಲು ಹುನ್ನಾರ ನಡೆಸುತ್ತಿದೆ ಎಂದು ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ‘ಕಿಸಾನ್ ಸಮ್ಮಾನ್‌‘ ಬೇಕಿಲ್ಲ. ರೈತರು ಬೆಳೆಯುವ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಕೊಡಬೇಕು. ಬೆಳೆ ನಷ್ಟದ ಪರಿಹಾರ ಧನ ಹೆಚ್ಚಿಸಬೇಕು. ಸಾಲ ಮನ್ನಾ ಮಾಡಬೇಕು. ಕುಟೀರ ಜ್ಯೋತಿ, ಭಾಗ್ಯ ಜ್ಯೋತಿ ಯೋಜನೆಗಳನ್ನು ಯಥಾವತ್ತಾಗಿ ಮುಂದುವರೆಸಬೇಕೆಂದು ಆಗ್ರಹಿಸಿದರು.

ಸಂಘದ ಜಿಲ್ಲಾ ಸಂಚಾಲಕರಾದ ಸಣ್ಣಕ್ಕಿ ರುದ್ರಪ್ಪ, ಹನುಮಂತಪ್ಪ ಹೊಳೆಯಾಜೆ, ಟಿ.ನಾಗರಾಜ, ಆರ್.ಆರ್.ತಾಯಪ್ಪ, ಕೆ.ಎಚ್.ಮಹಾಂತೇಶ, ಮುಖಂಡರಾದ ನಾಗರಾಜ ಟಿ.ಎಸ್., ಅಯ್ಯಣ್ಣ, ಕೆ.ಎಂ.ರೆಡ್ಡಿ, ಎಲ್. ನಾಗೇಶ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು