ಬೆಂಗಳೂರು: ‘ದಸರಾ ಹಬ್ಬದ ಸಡಗರದ ನಡುವೆ ಭಾರತದಲ್ಲಿ ಹಸಿದವರ ಸಂಖ್ಯೆ ಹೆಚ್ಚಿರುವ ವಿಷಾದಕರ ಸಂಗತಿ ಬೆಳಕಿಗೆ ಬಂದಿದ್ದು, ಇದಕ್ಕೆ ಕೇಂದ್ರ ಸರ್ಕಾರವೇ ಕಾರಣ’ ಎಂದು ಕಾಂಗ್ರೆಸ್ ಕಿಡಿಕಾರಿದೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಭಾರತ ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ 94ನೇ ಸ್ಥಾನದಿಂದ 101ನೇ ಸ್ಥಾನಕ್ಕೆ ಕುಸಿದಿದೆ. ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳಕ್ಕಿಂತಲೂ ಹಸಿವು, ಅಪೌಷ್ಟಿಕತೆ ಹೊಂದಿರುವುದು ಕಳವಳಕಾರಿ ಸಂಗತಿ. ಮೋದಿಯವರ ‘ನಹೀ ಖಾನೇ ದೂಂಗಾ’ ಮಾತಿನ ಅಸಲಿ ಅರ್ಥ ಇದೇ ಏನೋ!’ ಎಂದು ವ್ಯಂಗ್ಯವಾಡಿದೆ.

ಅಪೌಷ್ಟಿಕತೆ ನಿವಾರಣೆಗಾಗಿ ಶ್ರಮಿಸುತ್ತಿರುವ 116 ರಾಷ್ಟ್ರಗಳಲ್ಲಿ ಭಾರತ 101ನೇ ಸ್ಥಾನಕ್ಕೆ ಕುಸಿದಿದೆ. ನೆರೆಯ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳ ರಾಷ್ಟ್ರಗಳಿಂದ ಹಿಂದುಳಿದಿದೆ.

ಜಾಗತಿಕ ಹಸಿವು ಸೂಚ್ಯಂಕ 2021ರ ಪಟ್ಟಿ ಬಿಡುಗಡೆಯಾಗಿದ್ದು, ಭಾರತದ ನೆರೆಯ ರಾಷ್ಟ್ರಗಳಾದ ನೇಪಾಳ 76, ಬಾಂಗ್ಲಾದೇಶ 76, ಮ್ಯಾನ್ಮಾರ್ 71 ಮತ್ತು ಪಾಕಿಸ್ತಾನ 92ನೇ ರ‍್ಯಾಂಕ್ ಪಡೆದಿವೆ.

ಇದನ್ನೂ ಓದಿ... ಹಸಿವು ಸೂಚ್ಯಂಕ: ಪಾಕ್, ಬಾಂಗ್ಲಾ, ನೇಪಾಳಕ್ಕಿಂತಲೂ ಕೆಳಗಿನ ಸ್ಥಾನದಲ್ಲಿ ಭಾರತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.