ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತಿಥಿ ಉಪನ್ಯಾಸಕರಿಗೆ ಶೀಘ್ರ ಸಿಹಿಸುದ್ದಿ: ಅಶ್ವತ್ಥ ನಾರಾಯಣ

ಮುಷ್ಕರ ಕೈಬಿಟ್ಟು ಬೋಧನೆಗೆ ಮರಳಲು ಮನವಿ
Last Updated 12 ಜನವರಿ 2022, 3:56 IST
ಅಕ್ಷರ ಗಾತ್ರ

ಬೆಂಗಳೂರು: ‘ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಸಂಬಂಧ ಮುಖ್ಯಮಂತ್ರಿ ಜೊತೆ ಈಗಾಗಲೇ ಹಲವು ಬಾರಿ ಚರ್ಚಿಸಿದ್ದು, ಒಂದೆರಡು ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಆದ್ದರಿಂದ, ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಟ್ಟು ಬೋಧನೆಗೆ ಹಿಂದಿರುಗಬೇಕು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಮನವಿ ಮಾಡಿದರು.

ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಕುರಿತು ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಕಚೇರಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಮಂಗಳವಾರ ನಡೆದ ಮೂರು ತಾಸುಗಳ ಸಭೆಯ ಬಳಿಕ ಅವರು ಈ ಭರವಸೆ
ನೀಡಿದರು.

‘ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಪ್ರತ್ಯೇಕವಾಸದಲ್ಲಿದ್ದಾರೆ. ಅವರ ಜತೆ ಮತ್ತೊಮ್ಮೆ ಚರ್ಚಿಸಿ ಅಂತಿಮ ತೀರ್ಮಾನ ಪ್ರಕಟಿಸಲಾಗುವುದು. ಅತಿಥಿ ಉಪನ್ಯಾಸಕರ ಸಮಸ್ಯೆ ಇತ್ಯರ್ಥದಲ್ಲಿ ಆರ್ಥಿಕ ಹೊರೆ ಮತ್ತಿತರ ಅಂಶಗಳಿವೆ. ಒಟ್ಟಿನಲ್ಲಿ ವಿಷಯವನ್ನು ಸಹಾನುಭೂತಿಯಿಂದ ಪರಿಶೀಲಿಸಲಾಗುವುದು’ ಎಂದರು.

ವಿಧಾನ ಪರಿಷತ್‌ ಸದಸ್ಯರಾದ ಆಯನೂರು ಮಂಜುನಾಥ್, ಶಶಿಲ್ ನಮೋಶಿ, ಪುಟ್ಟಣ್ಣ, ಚಿದಾನಂದಗೌಡ, ಎಸ್.ವಿ. ಸಂಕನೂರು, ಅರುಣ್ ಶಹಾಪುರ, ವೈ.ಎ. ನಾರಾಯಣಸ್ವಾಮಿ, ಕೆ.ಟಿ. ಶ್ರೀಕಂಠೇಗೌಡ, ಭೋಜೇಗೌಡ, ಹಣಮಂತ ನಿರಾಣಿ, ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ. ಕುಮಾರ ನಾಯಕ್ ಮತ್ತು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ. ಪ್ರದೀಪ್,‌ ಉಪನ್ಯಾಸಕರಿಗೆ ಸಂಬಂಧಿಸಿದ 4–5 ಸಂಘಗಳ ಪ್ರತಿನಿಧಿಗಳು ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT