ಗುರುವಾರ , ಜೂನ್ 17, 2021
27 °C

ಕರಾವಳಿಯಲ್ಲಿ ಉತ್ತಮ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣ ಮಳೆ ಸುರಿದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕೊಣಾಜೆ ಗ್ರಾಮದ ಮನೆಯೊಂದರ ಚಾವಣಿ ಹಾಗೂ ಗೋಡೆಗಳು ಕುಸಿದಿವೆ. ರಾಷ್ಟ್ರೀಯ ಹೆದ್ದಾರಿ 169ರ ಗುರುಪುರ ಪೇಟೆ ಮತ್ತು ಬಾಮಿ ಶಾಲೆಯ ಮಧ್ಯೆ ಹೆದ್ದಾರಿ ಬದಿಯಲ್ಲಿ ಭೂ ಕುಸಿತ ಉಂಟಾಗಿದ್ದು, ಬೃಹತ್ ಬಂಡೆಯೊಂದು ಹೆದ್ದಾರಿಯತ್ತ ಮುಖ ಮಾಡಿದೆ. ಬಂಡೆ ಉರುಳಿದರೆ ಹೆದ್ದಾರಿ ವಾಹನ ಸಂಚಾರ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ. ಉಡುಪಿ ಜಿಲ್ಲೆಯ ಹಲವೆಡೆ ಬುಧವಾರ ಉತ್ತಮ ಮಳೆಯಾಗಿದೆ.

ತಗ್ಗಿದ ಮಳೆ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕೊಂಚ ತಗ್ಗಿದೆ. ಬುಧವಾರ ಆಗುಂಬೆಯಲ್ಲಿ 12.14 ಸೆಂ.ಮೀ ಮಳೆಯಾಗಿದೆ. ಆಗುಂಬೆ, ತೀರ್ಥಹಳ್ಳಿಯಲ್ಲಿ ಮಳೆಯಾಗುತ್ತಿರುವ ಕಾರಣ ತುಂಗಾ ಜಲಾಶಯದ ನೀರಿನ ಮಟ್ಟ ಹೆಚ್ಚಿದೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು