ರಾಜ್ಯಪಾಲ ಗೆಹಲೋತ್ ಪ್ರಮಾಣ ವಚನ ನಾಳೆ

ಬೆಂಗಳೂರು: ಕೇಂದ್ರದ ಮಾಜಿ ಸಚಿವ ಥಾವರಚಂದ್ ಗೆಹಲೋತ್ ಅವರು ರಾಜ್ಯದ ನೂತನ ರಾಜ್ಯಪಾಲರಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ರಾಜಭವನದ ಗಾಜಿನ ಮನೆಯಲ್ಲಿ ಭಾನುವಾರ ಬೆಳಿಗ್ಗೆ 10.30ಕ್ಕೆ ನಡೆಯುವ ಸಮಾರಂಭದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ನೂತನ ರಾಜ್ಯಪಾಲರಿಗೆ ಅಧಿಕಾರ ಮತ್ತು ಗೋಪ್ಯತೆಯ ಪ್ರಮಾಣವಚನ ಬೋಧಿಸಲಿದ್ದಾರೆ.
ಹಾಲಿ ರಾಜ್ಯಪಾಲ ವಜುಭಾಯಿ ವಾಲಾ ಅವರ ಅವಧಿ ಪೂರ್ಣಗೊಂಡಿದೆ. ಅವರ ಸ್ಥಾನಕ್ಕೆ ಥಾವರಚಂದ್ ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯಪಾಲರಾಗಿ ನೇಮಕಗೊಂಡ ಬಳಿಕ ಅವರು, ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವ ಸ್ಥಾನ ಹಾಗೂ ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ
ಸಲ್ಲಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.