ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂತನ 7 ವಿಶ್ವವಿದ್ಯಾಲಯಗಳಿಗೆ ಕುಲಪತಿಗಳ ನೇಮಿಸಿದ ಸರ್ಕಾರ

Last Updated 20 ಮಾರ್ಚ್ 2023, 18:31 IST
ಅಕ್ಷರ ಗಾತ್ರ

ಬೆಂಗಳೂರು: ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ, ಬಾಗಲಕೋಟೆ ಸೇರಿ ಏಳು ನೂತನ ವಿಶ್ವ ವಿದ್ಯಾಲಯಗಳಿಗೆ ಕುಲಪತಿಗಳನ್ನು ನೇಮಿಸಲಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಡಾ.ಬಿ ಕೆ ರವಿ (ಕೊಪ್ಪಳ), ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾಲಯದ ಡಾ.ಅಶೋಕ ಸಂಗಪ್ಪ ಆಲೂರು (ಕೊಡಗು), ಮೈಸೂರು ವಿಶ್ವವಿದ್ಯಾಲಯದ ಮಾನವಶಾಸ್ತ್ರ ವಿಭಾಗದ ಡಾ.ಎಂ.ಆರ್‌. ಗಂಗಾಧರ (ಚಾಮರಾಜನಗರ), ಬೆಳಗಾವಿಯ ಕೆ.ಎಸ್‌.ಗೋಗಟೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಆನಂದ್‌ ಶರದ್‌ ದೇಶಪಾಂಡೆ (ಬಾಗಲಕೋಟೆ) ಕುವೆಂಪು ವಿಶ್ವವಿದ್ಯಾಲಯದ ಡಾ.ಬಿ.ಎಸ್‌.ಬಿರಾದಾರ್‌ (ಬೀದರ್‌), ಬಾಗಲಕೋಟೆಯ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್‌ ವಿಭಾಗದ ಡಾ.ಸುರೇಶ್‌ ಎಚ್‌. ಜಂಗಮಶೆಟ್ಟಿ (ಹಾವೇರಿ), ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ.ಟಿ.ಸಿ.ತಾರಾನಾಥ್‌ ಅವರನ್ನು (ಹಾಸನ) ಕುಲಪತಿಗಳಾಗಿ ನೇಮಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT