ಸೋಮವಾರ, ಮೇ 17, 2021
22 °C

ಇಸಾಕ್‌ ಗ್ರಂಥಾಲಯಕ್ಕೆ ಸರ್ಕಾರದ ನೆರವು: ಸಚಿವ ಎಸ್. ಸುರೇಶ್‌ಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಮೈಸೂರಿನ ಸೈಯದ್‌ ಇಸಾಕ್ ಅವರ ಸಾರ್ವಜನಿಕ ಗ್ರಂಥಾಲಯಕ್ಕೆ ಸರ್ಕಾರದಿಂದ ನೆರವು ನೀಡಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ತಿಳಿಸಿದ್ದಾರೆ.

ಗ್ರಂಥಾಲಯಕ್ಕೆ ರಾಜಾರಾಂ ಮೋಹನರಾಯ್ ಗ್ರಂಥಾಲಯ ಪ್ರತಿಷ್ಠಾನದ ವತಿಯಿಂದ ಸಹಾಯ ಧನವನ್ನು ಮಂಜೂರು ಮಾಡಲು ಕೂಡಲೇ ಪ್ರಸ್ತಾವ ಸಲ್ಲಿಸಬೇಕೆಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಗೆ ಅವರು ಸೂಚನೆ ನೀಡಿದ್ದಾರೆ.

ದುಷ್ಕರ್ಮಿಗಳ ಕೃತ್ಯದಿಂದ 10 ಸಾವಿರಕ್ಕೂ ಹೆಚ್ಚು ಪುಸ್ತಕಗಳು ಭಸ್ಮವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನೆರವಿಗೆ ಧಾವಿಸಲು ಸಾರ್ವಜನಿಕ ಗ್ರಂಥಾಲಯ ಇಲಾಖೆಗೆ ಟಿಪ್ಪಣಿ ಮೂಲಕ ಸಚಿವರು ಸೂಚಿಸಿದ್ದಾರೆ.

ಇಲಾಖೆಯ ವತಿಯಿಂದ ನಿರ್ದಿಷ್ಟ ವರ್ಷದ ಪುಸ್ತಕ ಆಯ್ಕೆಯಾಗಿ ಲೇಖಕರು ಮತ್ತು ಪ್ರಕಾಶಕರಿಂದ ಸ್ವೀಕರಿಸಲ್ಪಟ್ಟು ಇಲಾಖೆಯಲ್ಲಿ ಸಂಗ್ರಹಿಸಲಾಗುವ ಆಯ್ದ ಪುಸ್ತಕಗಳನ್ನು ಇಸಾಕ್ ಅವರ ಗ್ರಂಥಾಲಯಕ್ಕೆ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದೂ ಅವರು ಸೂಚನೆ ನೀಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು