ಬೆಂಗಳೂರು: ‘ಕೊರೊನಾ ಕಾಲದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಖಾಸಗಿ ಅನುದಾನರಹಿತ ಶಾಲೆಗಳ 3.5 ಲಕ್ಷ ಶಿಕ್ಷಕರಿಗೆ ನೆರವು ನೀಡಲು ಸರ್ಕಾರ ಬದ್ಧ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭರವಸೆ ನೀಡಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಶುಕ್ರವಾರ ನಡೆದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ‘ಈಗಾಗಲೇ ಖಾಸಗಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿಗೆ ಅವಕಾಶ ನೀಡಲಾಗಿದೆ. ಅದರ ಜತೆಯಲ್ಲೇ ಶಿಕ್ಷಕರಿಗೆ ಯಾವುದಾದರೂ ರೂಪದಲ್ಲಿ ನೆರವು ನೀಡಲು ಯೋಚಿಸಲಾಗುತ್ತಿದೆ. ನೆರವು ನೀಡುವುದಂತೂ ಖಚಿತ' ಎಂದರು.

ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಸೇರಿದಂತೆ ಎಲ್ಲರೂ ಶಾಲೆಗಳ ಆರಂಭಕ್ಕೆ ಉತ್ಸುಕರಾಗಿದ್ದಾರೆ. ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದ ಬಳಿಕ ರಾಜ್ಯದಲ್ಲೂ ಶಾಲೆಗಳನ್ನು ಆರಂಭಿಸಲಾಗುವುದು ಎಂದರು.

34 ವರ್ಷಗಳ ಬಳಿಕ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸಲಾಗಿದೆ. ಎಲ್ಲರನ್ನೂ ಒಳಗೊಂಡು ಈ ನೀತಿಯನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ. ಒಳ್ಳೆಯ ಶಿಕ್ಷಣ ನೀಡುವ ಜವಾಬ್ದಾರಿ ಸರ್ಕಾರದ ಮೇಲಿದೆ. ಅದಕ್ಕೆ ಪೂರಕವಾಗಿ ಕೆಲಸ ಮಾಡಲಾಗುತ್ತಿದೆ ಎಂದು ಸಚಿವರು ಹೇಳಿದರು.

ಸಹಬಾಳ್ವೆ, ಸೌಹಾರ್ದ ಮೂಡಿಸಿ: ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, 'ರಾಜ್ಯದಲ್ಲಿ ಯಶಸ್ವಿಯಾಗಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳನ್ನು ನಡೆಸಿರುವುದು ಇಡೀ ದೇಶಕ್ಕೆ ಮಾದರಿಯಾಗಿದೆ. ಹೆಚ್ಚಿನ ಸಂಖ್ಯೆಯ ಮಕ್ಕಳು ಸರ್ಕಾರಿ ಶಾಲೆಗಳತ್ತ ಬರುತ್ತಿರುವುದು ಸಂತೋಷದ ಬೆಳವಣಿಗೆ. ಶಿಕ್ಷಕರು ಸಹಬಾಳ್ವೆ, ಸೌಹಾರ್ದ, ಸಹೋದರತ್ವ ಮತ್ತು ಸಾಮಾಜಿಕ ನ್ಯಾಯವನ್ನು ಅಳವಡಿಸಿಕೊಂಡು ಮುನ್ನಡೆಯಬೇಕು ಎಂದು ಸಲಹೆ ನೀಡಿದರು.

ಶಿಕ್ಷಕರ ವಿರುದ್ಧ ಕಳಂಕ ಬರದಂತೆ ಶಾಲೆಗಳಲ್ಲಿ ಮಕ್ಕಳ ಸ್ನೇಹಿ ವಾತಾವರಣ ನಿರ್ಮಿಸಬೇಕಿದೆ. ಸಮಾಜದ ಅಭಿವೃದ್ಧಿಯು ಶಿಕ್ಷಣದ ಜತೆ ಬೆಸೆದುಕೊಂಡಿದೆ ಎಂದರು.

ಸರ್ಕಾರದ ಶೈಕ್ಷಣಿಕ ಸಲಹೆಗಾರ ಎಂ.ಆರ್.ದೊರೆಸ್ವಾಮಿ, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮುನಿಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ನಾರಾಯಣಸ್ವಾಮಿ, ಅ.ದೇವೇಗೌಡ, ಅರುಣ್ ಶಹಾಪುರ, ಹಣಮಂತ ನಿರಾಣಿ, ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ವಿ.ಸುಮಂಗಲಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಪ್ರಾಥಮಿಕ ಶಾಲಾ ವಿಭಾಗದ 20 ಹಾಗೂ ಪ್ರೌಢ ಶಾಲಾ ವಿಭಾಗದ 10 ಶಿಕ್ಷಕರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಮತ್ತು ಪದವಿಪೂರ್ವ ಕಾಲೇಜುಗಳ ಇಬ್ಬರು ಪ್ರಾಂಶುಪಾಲರಿಗೆ ಉತ್ತಮ ಪ್ರಾಂಶುಪಾಲ ಪ್ರಶಸ್ತಿ ಪ್ರದಾನ ಮಾಡಲಾಯಿತು. ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದಿರುವ ರಾಜ್ಯದ ಮೂವರನ್ನು ಸನ್ಮಾನಿಸಲಾಯಿತು.

‘ಸರ್ಟಿಫಿಕೇಟ್ ಚೈನ್’ಗೆ ಚಾಲನೆ

ವಿದ್ಯಾರ್ಥಿಗಳ ಅಂಕಪಟ್ಟಿ ಮತ್ತು ಇತರ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಸಂರಕ್ಷಿಸಿ ಇಡುವ ‘ಬ್ಲಾಕ್ ಚೈನ್’ ತಂತ್ರಜ್ಞಾನ ಆಧಾರಿತ ‘ಸರ್ಟಿಫಿಕೇಟ್ ಚೈನ್’ ವ್ಯವಸ್ಥೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. ಕಲಿಕಾ ಸಂವರ್ಧನ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.