ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ಇಲ್ಲ: ಶಿಕ್ಷಣ ಸಚಿವ ಸುರೇಶ್ ಕುಮಾರ್

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ನಡೆಸದಿರಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಗ್ರೇಡಿಂಗ್: ‘ಕೋವಿಡ್ ವ್ಯಾಪಕವಾಗಿರುವ ಕಾರಣ ರಾಜ್ಯದಲ್ಲಿ ಈ ವರ್ಷ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದಿರಲು ತೀರ್ಮಾನಿಸಲಾಗಿದೆ. ಪ್ರಥಮ ಪಿಯುಸಿಯಲ್ಲಿ ತೆಗೆದುಕೊಂಡ ಅಂಕಗಳ ಆಧಾರದ ಮೇಲೆ ಗ್ರೇಡಿಂಗ್ ನೀಡಿ ಈ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಶುಕ್ರವಾರ ತಿಳಿಸಿದರು.
‘ವಿದ್ಯಾರ್ಥಿಗಳಿಗೆ ಎ, ಎ+, ಬಿ, ಬಿ+ ಎಂಬಂತೆ ಗ್ರೇಡ್ ನೀಡಲಾಗುವುದು. ಯಾವುದೇ ವಿದ್ಯಾರ್ಥಿ ತನಗೆ ಸಿಕ್ಕ ಗ್ರೇಡ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರೆ, ತೃಪ್ತಿ ಇಲ್ಲ ಎಂದರೆ ಅಂತಹ ವಿದ್ಯಾರ್ಥಿಗಳಿಗೆ ಮಾತ್ರ ಕೋವಿಡ್ ಬಿಕ್ಕಟ್ಟು ಮುಗಿದ ನಂತರ ಪರೀಕ್ಷೆ ನಡೆಸಲಾಗುವುದು’ ಎಂದೂ ಹೇಳಿದರು.
ವಿದ್ಯಾರ್ಥಿ ಮತ್ತು ಪೋಷಕರ ವರ್ಚುವಲ್ ಸಭೆಯಲ್ಲಿ ಪಿಎಂ ಮೋದಿ ದಿಢೀರ್ ಪ್ರತ್ಯಕ್ಷ
ಮಕ್ಕಳ ಯೋಗಕ್ಷೇಮ ಮತ್ತು ಮಕ್ಕಳ ಶೈಕ್ಷಣಿಕ ಭವಿಷ್ಯದ ಬಗ್ಗೆ ವಿಸ್ತೃತ ಚರ್ಚೆ ನಡೆಸಿದ್ದೇವೆ ಎಂದು ಅವರು ಹೇಳಿದ್ದಾರೆ.
ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ಈ ವರ್ಷ ಬಹುಚರ್ಚಿತ ವಿಚಾರ. ಕಳೆದ ವರ್ಷ ಪರಿಸ್ಥಿತಿ ಬೇರೆ ಇತ್ತು. ಹೇಗೋ ಮುಂಜಾಗ್ರತೆ ತೆಗೆದುಕೊಂಡು ಪರೀಕ್ಷೆ ನಡೆಸಿದ್ದೆವು.
ಈ ವರ್ಷ ಎರಡನೇ ಅಲೆ ಇರುವುದರಿಂದ ಪರಿಸ್ಥಿತಿ ಬೇರೆ ಇದೆ. ಒಂದು ವರ್ಗ ಪರೀಕ್ಷೆ ನಡೆಸಬೇಕು ಎಂದರೆ ಕೆಲವರು ಬೇಡ ಎನ್ನುತ್ತಿದ್ದಾರೆ. ಹೀಗಾಗಿ, ಬಿಇಓಗಳ ಮೂಲಕ ಮಕ್ಕಳು ಮತ್ತು ಪೋಷಕರ ಅಭಿಪ್ರಾಯ ಪಡೆದಿದ್ದೇನೆ. ಶಿಕ್ಷಣ ತಜ್ಞರ ಅಭಿಪ್ರಾಯ ಸಹ ಪಡೆದಿದ್ದೇನೆ ಎಂದು ಹೇಳಿದರು.
ಇದನ್ನೂ ಓದಿ.. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಎರಡು ಪ್ರಶ್ನೆಪತ್ರಿಕೆ ಮೂಲಕ ಪರೀಕ್ಷೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.