ಸೋಮವಾರ, ಸೆಪ್ಟೆಂಬರ್ 28, 2020
23 °C
ದಸರಾ 8ರಂದು ಉನ್ನತ ಮಟ್ಟದ ಸಮಿತಿ ಸಭೆ

ಒತ್ತಡ ತಂತ್ರಕ್ಕೆ ಸರ್ಕಾರ ಬಗ್ಗಲ್ಲ: ಸಚಿವ ಸಿ.ಟಿ. ರವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಮಗಳೂರು: ‘ಸರ್ಕಾರವು ಡ್ರಗ್‌ ಮಾಫಿಯಾವನ್ನು ಗಂಭೀರವಾಗಿ ಪರಿಗಣಿಸಿದೆ. ತನಿಖಾ ತಂಡದ ಮೇಲೆ ಒತ್ತಡ ಹೇರುವ, ವಿಷಯಾಂತರಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ. ಆದರೆ ಇದಕ್ಕೆ ಸರ್ಕಾರ ಬಗ್ಗಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಪ್ರತಿಕ್ರಿಯಿಸಿದರು.

ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ‘ಈ ಮಾಫಿಯಾಕ್ಕೆ ಹೊರ ರಾಜ್ಯ, ವಿದೇಶಗಳ ನಂಟು ಇದೆ. ಕೆಲವೆಡೆ ಭಯೋತ್ಪಾದಕರು, ರಾಜಕಾರಣಿಗಳು, ಸಿನಿಮಾ ನಟರ ಜತೆ ತಳಕು ಹಾಕಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಯುವಜನರನ್ನು ಪಿಡುಗಿನಿಂದ ಮುಕ್ತಗೊಳಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ’ ಎಂದು ಹೇಳಿದರು.

‘ದಸರಾಕ್ಕೆ ಸಂಬಂಧಿಸಿದಂತೆ ಇದೇ 8ರಂದು ಮುಖ್ಯಮಂತ್ರಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ಸಭೆ ನಡೆಯಲಿದೆ. ದಸರಾ ರೂಪುರೇಷೆ ಕುರಿತು ಚರ್ಚಿಸಲಾಗುವುದು. ನಂತರ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್‌ ಅವರ ಜತೆಗೂಡಿ ಸಮಗ್ರ ಯೋಜನೆ ರೂಪಿಸಲಾಗುವುದು’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು