ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣ ನೀತಿ ಹೆಸರಿನಲ್ಲಿ ಕನ್ನಡಕ್ಕೆ ದ್ರೋಹ: ಸಿದ್ದರಾಮಯ್ಯ

Last Updated 18 ಜೂನ್ 2021, 16:15 IST
ಅಕ್ಷರ ಗಾತ್ರ

ಬೆಂಗಳೂರು: ಪದವಿ ಕೋರ್ಸ್‌ಗಳ ವಿದ್ಯಾರ್ಥಿಗಳಿಗೆ ಭಾಷಾ ವಿಷಯಗಳ ಕಲಿಕೆಯ ಅವಧಿಯನ್ನು ನಾಲ್ಕು ಸೆಮಿಸ್ಟರ್‌ಗಳಿಂದ ಎರಡು ಸೆಮಿಸ್ಟರ್‌ಗಳಿಗೆ ಇಳಿಸಲು ಮುಂದಾಗಿರುವ ರಾಜ್ಯ ಸರ್ಕಾರ, ರಾಷ್ಟ್ರೀಯ ಶಿಕ್ಷಣ ನೀತಿ ಹೆಸರಿನಲ್ಲಿ ಕನ್ನಡಕ್ಕೆ ದ್ರೋಹ ಬಗೆಯುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

‘ಹೊಸ ಶಿಕ್ಷಣ ನೀತಿಯ ಭಾಗವಾಗಿ ಪದವಿ ಕೋರ್ಸ್‌ಗಳ ಅವಧಿಯನ್ನು ನಾಲ್ಕು ವರ್ಷಗಳಿಗೆ ಹೆಚ್ಚಿಸಲಾಗುತ್ತಿದೆ. ಅದಕ್ಕೆ ಪೂರಕವಾಗಿ ನೇಮಿಸಿರುವ ಕಾರ್ಯಪಡೆಯ ಪಠ್ಯಕ್ರಮ ರಚನಾ ಉಪ ಸಮಿತಿ, ಭಾಷಾ ವಿಷಯಗಳ ಕಲಿಕೆಯನ್ನು ಒಂದೇ ವರ್ಷಕ್ಕೆ ಸೀಮಿತಗೊಳಿಸುವಂತೆ ಶಿಫಾರಸು ಮಾಡಿದೆ. ಇದು ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರುದ್ಧವಾದ ನಡೆ’ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಟೀಕಿಸಿದ್ದಾರೆ.

‘ಕೇವಲ ಎರಡು ಸೆಮಿಸ್ಟರ್‌ಗಳಲ್ಲಿ ವಿದ್ಯಾರ್ಥಿಗಳು ಕನ್ನಡದ ಅತ್ಯುತ್ತಮವಾದ ಕೃತಿಗಳ ಕುರಿತು ಅಧ್ಯಯನ ಮಾಡಲು ಸಾಧ್ಯವೆ? ಮೌಲಿಕವಾದ ವಿಷಯಗಳ ಬದಲಿಗೆ ಅಂಬಾನಿ, ಅದಾನಿ ಅವರಂತಹ ಲೂಟಿಕೋರರ ಕತೆಗಳನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಈ ಸರ್ಕಾರ ಹೊರಟಿದೆಯೆ’ ಎಂದು ಪ್ರಶ್ನಿಸಿದ್ದಾರೆ.

ನಾಲ್ಕು ವರ್ಷಗಳ ಪದವಿ ಕೋರ್ಸ್‌ಗೆ ಅನುಗುಣವಾಗಿ ಆರು ಸೆಮಿಸ್ಟರ್‌ಗಳ ಕಾಲ ಭಾಷಾ ವಿಷಯ ಬೋಧಿಸಲು ಕ್ರಮ ಕೈಗೊಳ್ಳಬೇಕು. ರಾಷ್ಟ್ರೀಯ ಶಿಕ್ಷಣ ನೀತಿ ಹೆಸರಿನಲ್ಲಿ ಕನ್ನಡದ ಕುತ್ತಿಗೆ ಹಿಸುಕುವ ಪ್ರಯತ್ನ ಮಾಡಿದರೆ ಅದರ ವಿರುದ್ಧ ತೀವ್ರ ಸ್ವರೂಪದ ಹೋರಾಟ ಕೈಗೆತ್ತಿಕೊಳ್ಳಲಾಗುವುದು. ಕನ್ನಡ ನಾಡು, ನುಡಿಗೆ ದ್ರೋಹ ಎಸಗಿದವರನ್ನು ಈ ನಾಡು ಎಂದಿಗೂ ಕ್ಷಮಿಸಿಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT