ಬುಧವಾರ, ಅಕ್ಟೋಬರ್ 28, 2020
28 °C

ಇದು ಕಣ್ಣು, ಕಿವಿ, ಹೃದಯ ಇಲ್ಲದ ಸರ್ಕಾರ: ಡಿಕೆಶಿ ಕಿಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡ: ‘ಕಣ್ಣು, ಕಿವಿ ಹಾಗೂ ಹೃದಯವಿಲ್ಲದ ರಾಜ್ಯ ಸರ್ಕಾರವು ಕಳೆದ ವರ್ಷದ ನೆರೆ ಪರಿಹಾರವನ್ನೇ ಬಿಡುಗಡೆ ಮಾಡಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು.

ನಗರಕ್ಕೆ ಶನಿವಾರ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನೆರೆ ಸಂತ್ರಸ್ತರ ಕುರಿತು ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದೆ. ಅವರ ಕಷ್ಟಗಳು ಏನು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಭೇಟಿ ಮಾಡಿ ವಿಚಾರಿಸಬೇಕಿತ್ತು. ಆದರೆ ಆಲ್ಲೆಲ್ಲೋ ಕುಳಿತು ಮಾತನಾಡುತ್ತಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ‘ಈ ವರ್ಷ ದೇವರೇ ಗತಿ’ ಎಂದು ಕೈಚೆಲ್ಲಿದ್ದಾರೆ. ಹೀಗಾದರೆ ದೇಶದ ಜನರ ಪಾಡೇನು?’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು