ಶನಿವಾರ, ಏಪ್ರಿಲ್ 17, 2021
31 °C

ಸೆ.21ರಿಂದ ಸರ್ಕಾರಿ ಆಸ್ಪತ್ರೆ ಒಪಿಡಿ ಬಂದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವೇತನ ಪರಿಷ್ಕರಣೆಗೆ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂಬ ಕಾರಣಕ್ಕೆ ಸರ್ಕಾರದ ಜತೆ  ಮಂಗಳ
ವಾರದಿಂದ (ಸೆ.15) ಅಸಹಕಾರ ಚಳವಳಿ ಆರಂಭಿಸಲಿರುವ ವೈದ್ಯರು, ಇದೇ 21ರಿಂದ ಹೊರರೋಗಿಗಳ ವಿಭಾಗದ (ಒ‍ಪಿಡಿ) ಕರ್ತವ್ಯಕ್ಕೆ ಗೈರು ಹಾಜರಾಗಲಿದ್ದಾರೆ. 

‘ರಾಜ್ಯದಾದ್ಯಂತ ಸೆ.21ರಂದು ‘ಬೆಂಗಳೂರು ಚಲೋ’ ಜಾಥಾ ನಡೆಸಲಾಗುವುದು. ಅಂದಿನಿಂದ ತುರ್ತು ಸೇವೆಗಳನ್ನು ಮಾತ್ರ ನೀಡಲಾಗುವುದು’ ಎಂದು ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ.ಜಿ.ಎ. ಶ್ರೀನಿವಾಸ್ ‘ಪ್ರಜಾವಾಣಿ’ಗೆ ತಿಳಿಸಿದರು.

ಸಭೆಗೆ ಬಹಿಷ್ಕಾರ: ಆರೋಗ್ಯಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 4,968 ವೈದ್ಯರು ಮಂಗಳವಾರದಿಂದಲೇ (ಸೆ.15) ಆನ್‌ಲೈನ್‌ ಸಹಿತ ಎಲ್ಲ ಸರ್ಕಾರಿ ಸಭೆಗಳಿಂದ ದೂರ ಉಳಿಯಲಿದ್ದಾರೆ.

‘ವೈದ್ಯಕೀಯ ಚಿಕಿತ್ಸಾ ವರದಿಯೂ ಸೇರಿ ಯಾವುದೇ ವರದಿಗಳನ್ನು ಸರ್ಕಾರಕ್ಕೆ ಸಲ್ಲಿಸುವುದಿಲ್ಲ. ಆದರೆ, ಕರ್ತವ್ಯಕ್ಕೆ ಹಾಜರಾಗಿ, ಎಲ್ಲ ರೀತಿಯ ವೈದ್ಯಕೀಯ ಸೇವೆಯನ್ನು (ಸೆ.20ರವರೆಗೆ) ಮುಂದುವರಿಸುತ್ತೇವೆ’ ಎಂದು ಶ್ರೀನಿವಾಸ್‌ ಸ್ಪಷ್ಟಪಡಿಸಿದರು.  

‘ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ (ಸಿಜಿಎಚ್‌ಎಸ್‌) ಮಾದರಿಯಲ್ಲಿ ವೇತನ ಪರಿಷ್ಕರಿಸಬೇಕು
ಹಾಗೂ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಕೋರಿದ್ದೆವು. ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು