ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಎದುರಿಸಲು ಸಜ್ಜಾಗದ ಸರ್ಕಾರ: ಹೈಕೋರ್ಟ್ ತರಾಟೆ

ರೆಮ್‌ಡಿಸಿವಿರ್ ಕೋರಿಕೆಗೆ ಸ್ಪಂದಿಸಲು ಕೇಂದ್ರಕ್ಕೆ ನಿರ್ದೇಶನ
Last Updated 29 ಏಪ್ರಿಲ್ 2021, 21:10 IST
ಅಕ್ಷರ ಗಾತ್ರ

ಬೆಂಗಳೂರು: ರೆಮ್‌ಡಿಸಿವಿರ್ ಮತ್ತು ಆಮ್ಲಜನಕ ಪ್ರಮಾಣ ಹೆಚ್ಚಿಸುವಂತೆ ರಾಜ್ಯ ಸರ್ಕಾರ ಸಲ್ಲಿಸುವ ಬೇಡಿಕೆಗೆ ಕೂಡಲೇ ಸ್ಪಂದಿಸುವಂತೆ ಹೈಕೋರ್ಟ್‌ ಗುರುವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

‌ಕೋವಿಡ್ ಪ್ರಕರಣಗಳ ಕುರಿತ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಅರವಿಂದಕುಮಾರ್ ಅವರನ್ನು ಒಳಗೊಂಡ ವಿಶೇಷ ವಿಭಾಗೀಯದ ಪೀಠ, ಕೋವಿಡ್ ಎರಡನೇ ಅಲೆ ಬಗ್ಗೆ ಮಾಹಿತಿ ಇದ್ದರೂ ಸಜ್ಜಾಗದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಹಾಸಿಗೆಗಳ ಅವಶ್ಯಕತೆ ಮತ್ತು ಸಾಮರ್ಥ್ಯ ಹೆಚ್ಚಿಸಲು ಕೈಗೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆಯೂ ತಿಳಿಸಿದೆ.

ಹೆಚ್ಚುತ್ತಿರುವ ಕೋವಿಡ್‌ ಪ್ರಕರಣಗಳನ್ನು ಆಧರಿಸಿ ಸಾರ್ವಜನಿಕ ಆಸ್ಪತ್ರೆಗಳಿಗೆ ಅಗತ್ಯ ಇರುವ ರೆಮ್‌ಡಿಸಿವಿರ್ ಚುಚ್ಚುಮದ್ದು ಬಗ್ಗೆ ಅಂದಾಜು ಪಟ್ಟಿ ಸಲ್ಲಿಸಬೇಕು. ಗಂಭೀರ ಪರಿಸ್ಥಿತಿ ಪರಿಗಣಿಸಿ ಕರ್ನಾಟಕದ ಮನವಿ ಪುರಸ್ಕರಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ತಿಳಿಸಿತು.

ಬೆಂಗಳೂರು ನಗರಕ್ಕೇ ದಿನಕ್ಕೆ 10 ಸಾವಿರ ವಯಲ್‌ ರೆಮ್‌ಡಿಸಿವಿರ್ ಚುಚ್ಚುಮದ್ದು ಅಗತ್ಯವಿದೆ ಎಂದು ಫನಾ ಅಧ್ಯಕ್ಷ ಡಾ. ಪ್ರಸನ್ನ ತಿಳಿಸಿದರು.

ರಾಜ್ಯದಲ್ಲಿ 821 ಟನ್ ಆಮ್ಲಜನಕ ಉತ್ಪಾದನೆ ಆಗುತ್ತಿದ್ದು, ದಿನಕ್ಕೆ 600 ಟನ್ ಕೊರತೆ ಇದೆ. ಮುಂದಿನ ಏಳು ದಿನಗಳಿಗೆ ಅಗತ್ಯ ಇರುವ ಆಮ್ಲಜನಕದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕೋರಿಕೆ ಸಲ್ಲಿಸುವಂತೆ ಸರ್ಕಾರಕ್ಕೆ ಪೀಠ ನಿರ್ದೇಶನ ನೀಡಿತು.

ಆಮ್ಲಜನಕ ಸಹಿತ ಹಾಸಿಗೆಗಳ ಸಂಖ್ಯೆ ಹೆಚ್ಚಿಸುವಂತೆ ಪೀಠವು ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿತು. ಮುಂದಿನ ವಿಚಾರಣೆ ದಿನಾಂಕವಾದ ಮೇ 5ರಂದು ರೆಮ್‌ಡಿಸಿವಿರ್ ಮತ್ತು ಆಮ್ಲಜನಕ ಪ್ರಮಾಣವನ್ನು ಹೆಚ್ಚಿಸುವ ಬಗ್ಗೆ ನಿರ್ಧಾರ ದಾಖಲಿಸುವಂತೆ ಪೀಠ ನಿರ್ದೇಶನ ನೀಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT